HomeKarnatakaBIG NEWS: ಚಾರ್ಮಡಿ ಘಾಟ್ ನಲ್ಲಿ ಭೀಕರ ಕಾಡ್ಗಿಚ್ಚು: 500 ಎಕರೆಗೂ ಅಧಿಕ ಅರಣ್ಯ ಪ್ರದೇಶ...

BIG NEWS: ಚಾರ್ಮಡಿ ಘಾಟ್ ನಲ್ಲಿ ಭೀಕರ ಕಾಡ್ಗಿಚ್ಚು: 500 ಎಕರೆಗೂ ಅಧಿಕ ಅರಣ್ಯ ಪ್ರದೇಶ ಬೆಂಕಿಗಾಹುತಿ

ಚಿಕ್ಕಮಗಳೂರು: ಚಾರ್ಮಡಿ ಘಾಟ್ ಪ್ರದೇಶದಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಒಂದೆಡೆ ಕಾಡ್ಗಿಚ್ಚು, ಇನ್ನೊಂದೆಡೆ ಬಿರುಗಳಿಯಿಂದಾಗಿ ಬೆಂಕಿಯ ಕೆನ್ನಾಲಿಗೆ ವೇಗವಾಗಿ ಸುತ್ತಮುತ್ತಲ ಪ್ರದೇಶಕ್ಕೆ ವ್ಯಾಪಿಸುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ಕಾಡ್ಗಿಚ್ಚು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

ಚಾರ್ಮಡಿ ಘಾಟಿಯ ಬಿದಿರುತಳ ಗ್ರಾಮದಲ್ಲಿ ನಾಲ್ಕುದಿನಗಳ ಹಿಂದೆ ಬೆಂಕಿ ಕಾಣಿಸಿಕೊಂಡಿತ್ತು. 500 ಎಕರೆಗೂ ಅಧಿಕ ಪ್ರದೇಶ ಬೆಂಕಿಗಾಹುತಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular