ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಹುಚ್ಚಾಟ ; ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್ ..!

ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರು ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್ ಮಾಡಿ ಹುಚ್ಚಾಟ ಮೆರೆದಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ದೇವರಮನೆಯಲ್ಲಿ ರಸ್ತೆಗೆ ಅಡ್ಡಲಾಗಿ ಕಾರು ನಿಲ್ಲಿಸಿಕೊಂಡು ಪ್ರವಾಸಿಗರು ಮೋಜು, ಮಸ್ತಿ, ಡ್ಯಾನ್ಸ್ ಮಾಡುತ್ತಿದ್ದು, ಸಾರ್ವಜನಿಕರು ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ರಸ್ತೆ ಮಧ್ಯೆ ಕಾರು ನಿಲ್ಲಿಸಿಕೊಂಡು ಡ್ಯಾನ್ಸ್ ಮಾಡಿ ಕುಣಿದು ಕುಪ್ಪಳಿಸುತ್ತಿದ್ದಾರೆ. ಯಾರ ಮಾತಿಗೆ ಕೇರೆ ಎನ್ನದೇ ಪ್ರಪಾತದ ಸ್ಥಳದಲ್ಲೂ ಪ್ರವಾಸಿಗರು ಮೋಜು ಮಸ್ತಿ ಮಾಡುತ್ತಿದ್ದಾರೆ. ಕೆಲವು ಕಿರು ಜಲಪಾತಗಳಲ್ಲಿ, ಜಾರು ಬಂಡೆಗಳನ್ನು ಹತ್ತಿ ಸೆಲ್ಪಿ ತೆಗೆದುಕೊಳ್ಳಲು ಪ್ರವಾಸಿಗರು ಮುಂದಾಗುತ್ತಿದ್ದಾರೆ.ಜಾರುಬಂಡೆಗಳ ಮೇಲೆ ಹತ್ತಿ ಸೆಲ್ಪಿ ತೆಗೆದುಕೊಳ್ಳಲು  ಹುಚ್ಚಾಟ ಮಾಡುತ್ತಿರುವುದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read