ಸುಕ್ಮಾ: ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದೆ. ಭದ್ರತಾಪಡೆಗಳು ನಡೆಸಿದ ಎನ್ ಕೌಂಟರ್ ಕಾರ್ಯಾಚರಣೆಯಲ್ಲಿ ಮೂವರು ಮಾವೋವಾದಿಗಳು ಬಲಿಯಾಗಿದ್ದಾರೆ.
ಈ ಬಗ್ಗೆ ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವ್ಹಾಣ್ ಮಾಹಿತಿ ನೀಡಿದ್ದು, ಮಾವೋವಾದಿಗಳು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿದ್ದವು. ದಟ್ಟಾರಣ್ಯದಲ್ಲಿ ಭದ್ರತಾಪಡೆಗಳು ಹಾಗೂ ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಭದ್ರತಾಪಡೆಗಳ ಗುಂಡೇಟಿಗೆ ಈವರೆಗೆ ಮೂವರು ಮಾವೋವಾದಿಗಳು ಬಲಿಯಾಗಿದ್ದಾರೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
