BIG NEWS: ಹೆಡ್ ಕಾನ್ಸ್ ಟೇಬಲ್ ಸೇರಿದಂತೆ ಒಂದೇ ಕುಟುಂಬದ ಐವರ ಹತ್ಯೆ

ರಾಯ್ಪುರ: ಒಂದೇ ಕುಟುಂಬದ ಐವರನ್ನು ಹತ್ಯೆ ಮಡಿರುವ ಘಟನೆ ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಬೆಲಕಿಗೆ ಬಂದಿದೆ.

ಮೂವರು ಮಹಿಳೆಯರು, ಓರ್ವ ಹೆಡ್ ಕಾನ್ಸ್ ಟೇಬಲ್ ಸೇರಿದಂತೆ ಐವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ ಗ್ರಾಮದ ಕೆಲವರು ವಾಮಾಚಾರ ನಡೆಸುತ್ತಿರುವ ಶಂಕೆ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ಐವರನ್ನು ಹೊಡೆದು ಹತ್ಯೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಗ್ರಾಮದ 15 ಜನರ ಗುಂಪು ಮನೆಗೆ ನುಗ್ಗಿ ದೊಣ್ಣೆ, ಕೊಡಲಿಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಹೊಡೆದು ಐವರನ್ನು ಕೊಂದಿದ್ದಾರೆ. ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸುವಷ್ಟರಲ್ಲಿ ಐವರು ಸಾವನ್ನಪ್ಪಿದ್ದಾರೆ.

ಮೃತರನ್ನು ಮೌಸಂ ಕನ್ನಾ, ಮೌಸಂ ಬುಚ್ಚಾ, ಮೌಸಂ ಬಿರಿ, ಕರ್ಕ ಲಚ್ಚಿ ಹಾಗೂ ಮೌಸಂ ಅರ್ಜೊ ಎಂದು ಗುರುತಿಸಲಾಗಿದೆ.

ಮೃತದರಲ್ಲಿ ಛತ್ತೀಸ್ ಗಢ ಪೊಲೀಸರೊಂದಿಗೆ ಕೆಲಸ ಮಾಡುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಕೂಡ ಸೇರಿದ್ದಾರೆ. ಮನೆಯವರು ಗ್ರಾಮದಲ್ಲಿ ವಾಮಾಚಾರ ನಡೆಸುತ್ತಿದ್ದರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದರಿಂದಾಗಿ ಹಳ್ಲಿಯಲ್ಲಿ ಮಕ್ಕಳಿಗೆ ಆರೋಗ್ಯ ಸಮಸ್ಯೆಗಳು, ಜನರಿಗೆ ಹಾನಿಯುಂಟಾಗುತ್ತಿತ್ತು ಎಂದಿದ್ದಾರೆ. ಇನ್ನು ಪ್ರಕರಣ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read