HomeIndiaBREAKING: ಛತ್ತೀಸ್ ಗಢದಲ್ಲಿ ಖಾಸಗಿ ವಿಮಾನ ಪತನ: ಪೈಲಟ್ ಹಾಗೂ ಕೋ-ಪೈಲಟ್ ಸಾವು

BREAKING: ಛತ್ತೀಸ್ ಗಢದಲ್ಲಿ ಖಾಸಗಿ ವಿಮಾನ ಪತನ: ಪೈಲಟ್ ಹಾಗೂ ಕೋ-ಪೈಲಟ್ ಸಾವು

ರಾಯ್ಪುರ: ಛತ್ತೀಸ್ ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್ ಹಾಗೂ ಸಹ ಪೈಲಲಟ್ ಇಬ್ಬರೂ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಛತ್ತೀಸ್ ಗಢದ ಜಶ್ ಪುರದಲ್ಲಿ ಈ ದುರಂತ ಸಂಭವಿಸಿದೆ. ವಿಮಾನ ಪತನಕ್ಕೆ ನಿಖರ ಕಾರಣಗಳು ತಿಳಿದುಬಂದಿಲ್ಲ. ಇದೊಂದು ಖಾಸಗಿ ವಿಮಾನವಾಗಿದ್ದು, ಭೂಮಿಯಿಂದ ಕೇವಲ ೩೦ ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿತ್ತು. ಈ ವೇಳೆ ಪತನಗೊಂಡಿದೆ.

ವಿಮಾನ ಪತನಕ್ಕೂ ಮುನ್ನ ವಿಮಾನ ಮರಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಪತನಗೊಂಡಿದೆ. ವಿಮಾನದಲ್ಲಿ ಪೈಲಟ್, ಸಹ ಪೈಲಟ್ ಬಿಟ್ಟು ಪ್ರಯಾಣಿಕರು ಯಾರೂ ಇರಲಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular