ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಾಯಿಗೆ ಹೋಲಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಗೆ ಮಣಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಿಯಾಂಕ್ ಖರ್ಗೆ ಅವರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿದ್ದಾರೆ.
ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಮಾತನಾಡಿದ ಅವರು, ನನ್ನ ಹೇಳಿಕೆಯಿಂದ ಸಚಿವ ಪ್ರಿಯಾಂಕ್ ಖರ್ಗೆ ಹೆಸರನ್ನು ಕೈಬಿಡುತ್ತೇನೆ ಎಂದು ತಿಳಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಹೆಸರು ಉಲ್ಲೇಖ ಮಾಡಬಾರದಿತ್ತು ಎಂದು ಮಾಜಿ ಸಿಎಂ ಯಡಿಯೂರಪ್ಪ ಕರೆ ಮಾಡಿ ಹೇಳಿದ್ದಾರೆ. ನನ್ನ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.