HomeLatest Newsಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಗೆ ಮಣಿದ ಛಲವಾದಿ ನಾರಾಯಣಸ್ವಾಮಿ: ಪ್ರಿಯಾಂಕ್ ಖರ್ಗೆ ನಾಯಿಗೆ ಹೋಲಿಸಿದ್ದಕ್ಕೆ ವಿಷಾದ

ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಗೆ ಮಣಿದ ಛಲವಾದಿ ನಾರಾಯಣಸ್ವಾಮಿ: ಪ್ರಿಯಾಂಕ್ ಖರ್ಗೆ ನಾಯಿಗೆ ಹೋಲಿಸಿದ್ದಕ್ಕೆ ವಿಷಾದ

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಾಯಿಗೆ ಹೋಲಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಗೆ ಮಣಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಿಯಾಂಕ್ ಖರ್ಗೆ ಅವರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿದ್ದಾರೆ.

ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಮಾತನಾಡಿದ ಅವರು, ನನ್ನ ಹೇಳಿಕೆಯಿಂದ ಸಚಿವ ಪ್ರಿಯಾಂಕ್ ಖರ್ಗೆ ಹೆಸರನ್ನು ಕೈಬಿಡುತ್ತೇನೆ ಎಂದು ತಿಳಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಹೆಸರು ಉಲ್ಲೇಖ ಮಾಡಬಾರದಿತ್ತು ಎಂದು ಮಾಜಿ ಸಿಎಂ ಯಡಿಯೂರಪ್ಪ ಕರೆ ಮಾಡಿ ಹೇಳಿದ್ದಾರೆ. ನನ್ನ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular