ಸರ್ಕಾರಿ ಕೆಲಸದ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ; ಹೆಡ್ ಕಾನ್ಸ್ ಟೇಬಲ್ ಸಸ್ಪೆಂಡ್

ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಹೆಡ್ ಕಾನ್ಸ್ ಟೇಬಲ್ ಓರ್ವರು ಲಕ್ಷಾಂತರ ರೂಪಾಯಿ ವಂಚಿಸಿರುವ ಆರೋಪ ಕೇಳಿಬಂದಿದೆ.

ಮಹಿಳೆಯೊಬ್ಬರು ನೀಡಿರುವ ದೂರಿನ ಮೇರೆಗೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಹೆಡ್ ಕಾನ್ಸ್ ಟೇಬಲ್ ಪ್ರಶಾಂತ್ ಕುಮಾರ್ ಎಂಬುವವರನ್ನು ಅಮಾನತು ಮಾಡಲಾಗಿದೆ.

ಮಹಾಲಕ್ಷ್ಮೀ ಲೇಔಟ್ ನಿವಾಸಿ ಭಾಗ್ಯಮ್ಮ ಎಂಬುವವರು ದೂರು ನೀಡಿದ್ದು, ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ನಗರ ಸಶಸ್ತ್ರ ಮೀಸಲು ಪ್ರಧಾನ ಕಚೇರಿ ಹೆಡ್ ಕಾನ್ಸ್ ಟೇಬಲ್ ಪ್ರಶಾಂತ್ ಕುಮಾರ್ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ದೂರಿದ್ದಾರೆ.

2011ರಲ್ಲಿ ಭಾಗ್ಯಮ್ಮ, ಹೆಡ್ ಕಾನ್ಸ್ ಟೇಬಲ್ ಪ್ರಶಾಂತ್ ಕುಮಾರ್ ಗೆ ಪರಿಚಯವಾಗಿದ್ದು, ತಮ್ಮ ಇಬ್ಬರು ಮಕ್ಕಳಿಗೆ ಸರ್ಕಾರಿ ಕೆಲಸ ಕೊಡಿಸುವಂತೆ ಕೇಳಿದ್ದರಂತೆ. ತನಗೆ ಸರ್ಕಾರಿ ಅಧಿಕಾರಿಗಳ ಪರಿಚಯವಿದೆ ಎಂದು ಹೇಳಿ ಮಕ್ಕಳಿಗೆ ಕೆಲಸ ಕೊಡಿಸುತ್ತೇನೆ ಎಂದು 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರಂತೆ.

ಬಳಿಕ ಕೆಲ ದಿನಗಳ ಹಿಂದೆ ಪ್ರಶಾಂತ್ ಕುಮಾರ್, ಮಂಜುನಾಥ್ ಪ್ರಸಾದ್ ಎಂಬುವವರನ್ನು ತನ್ನ ಪಿಎ ಎಂದು ಪರಿಚಯಿಸಿ ನಿಮ್ಮ ಇಬ್ಬರು ಮಕ್ಕಳಿಗೆ ಎಸ್ ಡಿಎ, ಎಫ್ ಡಿಎ ಹುದ್ದೆ ಕೊಡಿಸುತ್ತೇನೆ ಎಂದು 47 ಲಕ್ಷ ಹಣ ಪಡೆದಿದ್ದಾರಂತೆ. ಆದರೆ ಈವರೆಗೂ ಯಾವುದೇ ನೌಕರಿಯನ್ನೂ ಕೊಡಿಸಿಲ್ಲ. ಹಣವನ್ನೂ ವಾಪಾಸ್ ಕೊಟ್ಟಿಲ್ಲ ಎಂದು ಭಾಗ್ಯಮ್ಮ ದೂರು ದಾಖಲಿಸಿದ್ದಾರೆ.

ಹೆಡ್ ಕಾನ್ಸ್ ಟೇಬಲ್ ಪ್ರಶಾಂತ್ ಕುಮಾರ್, ಪತ್ನಿ ದೀಪಾ ಹಾಗೂ ಮಂಜುನಾಥ್ ಪ್ರಸಾದ್ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಹೆಡ್ ಕಾನ್ಸ್ ಟೇಬಲ್ ಪ್ರಶಾಂತ್ ಕುಮಾರ್ ಅವರನ್ನು ಅವಮಾನತು ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read