HomeLatest Newsಪತ್ನಿಗೆ ವಂಚನೆ: ಪ್ರೇಯಸಿಯೊಂದಿಗೆ ಪಲ್ಲಂಗದಲ್ಲಿದ್ದಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ ಟೆಕ್ಕಿ ಪತಿ

ಪತ್ನಿಗೆ ವಂಚನೆ: ಪ್ರೇಯಸಿಯೊಂದಿಗೆ ಪಲ್ಲಂಗದಲ್ಲಿದ್ದಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ ಟೆಕ್ಕಿ ಪತಿ

ಬೆಂಗಳೂರು: ಪತ್ನಿಗೆ ವಂಚಿಸಿ ಪ್ರೇಯಸಿಯೊಂದಿಗೆ ಟೆಕ್ಕಿ ಪತಿ ಅಕ್ರಮ ಸಂಬಂಧ ಹೊಂದಿದ್ದಾನೆ. ಜಾತಿ ನಿಂದನೆ ಮಾಡಿ ಪತ್ನಿಯ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರೇಯಸಿಯ ಜೊತೆ ಪಲ್ಲಂಗದಲ್ಲಿದ್ದಾಗಲೇ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಎಲೆಕ್ಟ್ರಾನಿಕ್ ಸಿಟಿಯ ಪಿಜಿಯಲ್ಲಿ ಪ್ರೇಯಸಿ ಜತೆ ಪತಿ ಸಿಕ್ಕಿಬಿದ್ದಿದ್ದು, ಆರೋಪಿ ಪತಿ ಜೆಡ್ರೆಲಾ ಜಾಕೂಬ್ ಆರೂಪ್ ನನ್ನು ಬಂಧಿಸಲಾಗಿದೆ.

ಕಳೆದ ಎರಡು ವರ್ಷಗಳಿಂದ ಪತ್ನಿಯೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದ. ಖಾಸಗಿ ಸಂಸ್ಥೆಯಲ್ಲಿ ಪ್ರತಿಷ್ಠಿತ ಹುದ್ದೆಯಲ್ಲಿ ಪತ್ನಿ ಕೆಲಸ ಮಾಡುತ್ತಿದ್ದರು. ಪತಿಗೆ ಕೆಲಸವಿಲ್ಲದ ಕಾರಣ ತನ್ನ ಕೆಲಸವನ್ನು ಬಿಟ್ಟು ಕೊಟ್ಟಿದ್ದರು. ಲಕ್ಷಾಂತರ ರೂ. ಸಂಬಳ ಬರುತ್ತಿದ್ದ ತನ್ನ ಕೆಲಸವನ್ನು ಪತಿಗೆ ಕೊಡಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದು ಮಗುವಾದ ನಂತರ ಪತ್ನಿಗೆ ಜಾತಿ ನಿಂದನೆ ಮಾಡಿ ಪತಿ ಕಿರುಕುಳ ನೀಡಿದ್ದ. ಗರ್ಭಪಾತವಾಗುವಂತೆ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದ. ಪತಿ ಜಾಕೂಬ್ ಪತ್ನಿಗೆ ಮೋಸ ಮಾಡಿ ಬೇರೆ ಯುವತಿಯೊಂದಿಗೆ ಸಹವಾಸ ಬೆಳೆಸಿ ರೀಲ್ಸ್ ಮಾಡುತ್ತಿದ್ದ. ಹೀಗಾಗಿ ಪತಿಯ ವಿರುದ್ಧ ಅಟ್ರಾಸಿಟಿ ಮತ್ತು ಹಲ್ಲೆ ಪ್ರಕರಣವನ್ನು ಪತ್ನಿ ದಾಖಲಿಸಿದ್ದರು. ಡಿಸಿಆರ್ಇ ಪಶ್ಚಿಮ ವಿಭಾಗದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ನಿ ಮಾಹಿತಿ ಆಧರಿಸಿ ಯುವತಿ ಮನೆಗೆ ಪೊಲೀಸರು ಭೇಟಿ ನೀಡಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular