‘ಮನರಂಜನಾ ಕೇಂದ್ರಗಳಲ್ಲಿ ಸುರಕ್ಷತಾ ಕ್ರಮ ಪರಿಶೀಲಿಸಿ’ : ಡಿಸಿಎಂ ಡಿಕೆಶಿ ಖಡಕ್ ಸೂಚನೆ

ಬೆಂಗಳೂರು : ಮನರಂಜನಾ ಕೇಂದ್ರಗಳಲ್ಲಿ ಯಾವುದೇ ಅವಘಡ ಸಂಭವಿಸದಂತೆ ಸುರಕ್ಷತಾ ಕ್ರಮ ಪರಿಶೀಲಿಸಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.

ಗುಜರಾತ್ನ ರಾಜ್ಕೋಟ್ ನಗರದ ಮನರಂಜನಾ ಕೇಂದ್ರದಲ್ಲಿ ಸಂಭವಿಸಿದ ಅಗ್ನಿ ದುರಂತವು ಕಳವಳಕಾರಿ ದುರ್ಘಟನೆ. ಈ ದುರಂತವು ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದ್ದು, ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಮಾಲ್ಗಳು, ಗೇಮ್ ಝೋನ್ಸ್, ಮನರಂಜನೆ ಕೇಂದ್ರದಲ್ಲಿ ಅಗ್ನಿ ದುರಂತ ಸೇರಿದಂತೆ ಎಲ್ಲ ರೀತಿಯ ಅನಾಹುತ ತಪ್ಪಿಸಲು ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಪೊಲೀಸ್, ಅಗ್ನಿಶಾಮಕ ದಳ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪರಿಶೀಲಿಸಬೇಕು.

ಜನರ ಸುರಕ್ಷತೆ ನಿರ್ಲಕ್ಷಿಸಿರುವ ಮನರಂಜನಾ ಕೇಂದ್ರಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ರಾಜ್ಯದಲ್ಲಿ ಅಗ್ನಿ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು” ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read