ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ.
ಬೆಂಗಳೂರಿನ ಕಡಬಗೆರೆಯಲ್ಲಿ ಚಿರತೆ ಓಡಾಡುತ್ತಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ನಿವಾಸಿಗಳಲ್ಲಿ ಎಚ್ಚರದಿಂದ ಇರುವಂತೆ ಸೂಚಿಸಿದ್ದಾರೆ. ಕಡಬಗೆರೆಯಲ್ಲಿ ಮನೆಯೊಂದಕ್ಕೆ ನುಗ್ಗಿದ ಚಿರತೆ ನಾಯಿಯೊಂದನ್ನು ಹೊತ್ತೊಯ್ದಿದೆ. ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ.
ಕಡಬಗೆರೆ ಹಾಗೂ ಸುತ್ತಮುತ್ತಲಿನ ವಿಸಾಗಳು ಮನೆಯಿಂದ ಹೊರಬರಲು ಜೀವಭಯದಲ್ಲಿ ಓಡಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಜನರಲ್ಲಿ ಎಚ್ಚರಿಕೆ ಮೂಡಿಸಿದ್ದು, ಸಂಜೆ ಹಾಗೂ ರಾತ್ರಿ ಓಡಾಡುವಾಗ ಸ್ಥಳೀಯರು ಎಚ್ಚರಿಕೆ ವಹಿಸಬೇಕು ಹಾಗೂ ಮಕ್ಕಳನ್ನು ಹೊರಗೆ ಕಳುಹಿಸುವಾಗ ಜಾಗೃತೆ ಇರಲಿ ಎಂದು ವಾಯ್ಸ್ ಮೆಸೇಜ್ ಮೂಲಕ ಸಂದೇಶ ರವಾನಿಸಿದ್ದಾರೆ. ಮತ್ತೊಂದೆಡೆ ಚಿರತೆ ಕಾರ್ಯಾಚರಣೆಗೂ ಕ್ರಮ ಕೈಗೊಳ್ಳಲಾಗಿದೆ.
