HomeAgricultureರಾಜ್ಯಕ್ಕೆ ಶಾಕಿಂಗ್ ನ್ಯೂಸ್: ಬರದಿಂದ ಕೃಷಿ ಉತ್ಪಾದನೆ ಶೇ. 50 ಇಳಿಕೆ, 28,000 ಕೋಟಿ ಬೆಳೆ...

ರಾಜ್ಯಕ್ಕೆ ಶಾಕಿಂಗ್ ನ್ಯೂಸ್: ಬರದಿಂದ ಕೃಷಿ ಉತ್ಪಾದನೆ ಶೇ. 50 ಇಳಿಕೆ, 28,000 ಕೋಟಿ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಕೃಷಿ ಉತ್ಪಾದನೆ ಶೇಕಡ 50ರಷ್ಟು ಕಡಿಮೆಯಾಗಿದೆ. ಬರದಿಂದ ಸುಮಾರು 28,000 ಕೋಟಿ ರೂ. ನಷ್ಟು ಬೆಳೆ ಹಾನಿಯಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.

ಸಾಮಾನ್ಯವಾಗಿ 1.16 ಕೋಟಿ ಮೆಟ್ರಿಕ್ ಟನ್ ಕೃಷಿ ಉತ್ಪಾದನೆ ಆಗಬೇಕಿತ್ತು. ಆದರೆ ಈ ಬಾರಿ ಬರ ಪರಿಸ್ಥಿತಿ ಕಾರಣ 58 ಲಕ್ಷ ಮೆಟ್ರಿಕ್ ಟನ್ ಕೃಷಿ ಉತ್ಪಾದನೆ ನಷ್ಟವಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಲ್ಲಿ ಕೃಷಿ ಉತ್ಪಾದನೆ ಹೆಚ್ಚಾಗುವ ನಿರೀಕ್ಷೆ ಇದೆ. ಬರ ಪರಿಹಾರಕ್ಕೆ 4000 ಕೋಟಿ ರೂ. ನಿಡುವಂತೆ ರಾಜ್ಯದಿಂದ ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೃಷಿ ಉತ್ಪನ್ನ ನಷ್ಟವಾಗುವುದರಿಂದ ರಾಜ್ಯಕ್ಕೆ ಸಮಸ್ಯೆ ಆಗದು. ರಾಷ್ಟ್ರಮಟ್ಟದಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ. ರಾಜ್ಯದಲ್ಲಿ ಉತ್ತಮ ಮಳೆಯ ಲಕ್ಷಣಗಳು ಗೋಚರಿಸುತ್ತಿವೆ. ನೀರಿನ ಅಭಾವದ ಬಗ್ಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಭತ್ತ ಬೆಳೆಯದಂತೆ ತಿಳಿಸಿದ ನಂತರವೂ ಕೆಲವರು ಭತ್ತ ಬಿತ್ತನೆ ಮಾಡಿದ್ದು, ಬಿತ್ತಿದ್ದ ಬೆಳೆಗಳು ನಾಶವಾಗುವ ಸಾಧ್ಯತೆ ಇದೆ. 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular