ಕಾವೇರಿ: ರೈತರ ಪರವಾಗಿ ನಾಳೆ ಮೇಲ್ಮನವಿ ಸಲ್ಲಿಕೆ

ಮಂಡ್ಯ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ರೈತರ ಪರವಾಗಿ ಸೆ. 26ರಂದು ಮೇಲ್ಮನವಿ ಸಲ್ಲಿಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ನಾಗಮಂಗಲದಲ್ಲಿ ಮಾತನಾಡಿದ ಅವರು, ರೈತರ ಪರವಾಗಿ ಸೆ. 26ರಂದು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಲಿದ್ದು, ಈ ವಿಚಾರದಲ್ಲಿ ಪ್ರತಿಪಕ್ಷದವರು ವಿನಾಕಾರಣ ಅಪಪ್ರಚಾರ ಮಾಡಬಾರದು ಎಂದು ಹೇಳಿದ್ದಾರೆ.

ರೈತರು, ರೈತ ಪರ ಹೋರಾಟಗಾರರನ್ನು ಎತ್ತಿಕಟ್ಟಬಾರದು. ಇಂತಹ ಸೂಕ್ಷ್ಮ ವಿಚಾರದಲ್ಲಿ ಸರ್ಕಾರದೊಂದಿಗೆ ಸಹಕರಿಸಿ ರೈತರ ಪರ ಒಂದಾಗಿ ನಿಲ್ಲಬೇಕು. ಪ್ರತಿಪಕ್ಷದವರು ಕಾವೇರಿ ವಿಚಾರದಲ್ಲಿ ಸಮರ್ಥವಾಗಿ ವಾದ ಮಂಡಿಸಿಲ್ಲ ಎಂದು ಆರೋಪಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ತಮಿಳುನಾಡಿನವರು ಪ್ರತಿದಿನ 25000 ಕ್ಯುಸೆಕ್ ನೀರು ಹರಿಸಬೇಕೆಂದು ಮೇಲ್ಮನವಿ ಸಲ್ಲಿಸಿದ್ದರು. ಸರಿಯಾದ ರೀತಿಯಲ್ಲಿ ರಾಜ್ಯದ ವಕೀಲರು, ಅಧಿಕಾರಿಗಳು ವಾದ ಮಂಡಿಸಿ ವಿವರಣೆ ನೀಡಿದ ನಂತರ 5,000 ಕ್ಯುಸೆಕ್ ನೀರು ಬಿಡಲು ಸೂಚಿಸಲಾಗಿದೆ. ಸರ್ಕಾರ ಸರಿಯಾದ ರೀತಿಯಲ್ಲಿ ವಾದ ಮಂಡಿಸದಿದ್ದರೆ ಇನ್ನೂ ಹೆಚ್ಚಿನ ಪ್ರಮಾಣದ ನೀರು ಹರಿಸಬೇಕಿತ್ತು. ಸರ್ಕಾರ ರೈತರ ಪರವಾಗಿದ್ದು, ರೈತರ ಕ್ಷಣಗೆ ಬದ್ಧವಾಗಿದೆ ಎಂದು ಚಲುವರಾಯಸ್ವಾಮಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read