HomeKarnatakaBREAKING: ಕ್ಲೋರೈಡ್ ಕೆಮಿಕಲ್ ಲಾರಿ ಪಲ್ಟಿಯಾಗಿ ಅವಘಡ: ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್

BREAKING: ಕ್ಲೋರೈಡ್ ಕೆಮಿಕಲ್ ಲಾರಿ ಪಲ್ಟಿಯಾಗಿ ಅವಘಡ: ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕ್ಲೋರೈಡ್ ಕೆಮಿಕಲ್ ಲಾರಿ ಪಲ್ಟಿಯಾಗಿ ಅವಘಡ ಸಂಭವಿಸಿರುವ ಘಟನೆ ಬೆಂಗಳುರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಕುಲುವನಹಳ್ಳಿ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಮಿಕಲ್ ಲಾರಿ ಪಟ್ಲಿಯಾಗಿ ಬಿದ್ದಿದ್ದು, ರಾಸಾಯನಿಕ ಸೋರಿಕೆಯಾಗುವ ಭೀತಿ ಎದುರಾಗಿದೆ. ಕೆಮಿಕಲ್ ಲಾರಿ ಪಲ್ಟಿಯಾದ ಪರಿಣಾಮ 1 ಕಿ.ಮೀ ಗೂ ಹೆಚ್ಚು ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಮತ್ತೊಂದೆಡೆ ಕೆಮಿಕಲ್ ಸೋರಿಕೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular