ಕೋಲಾರ: ರಾಜ್ಯದಲ್ಲಿ ಇಂದು ಸಾಲು ಸಾಲು ಅಪಘಾತ ಪ್ರಕರಣಗಳು ನಡೆದಿವೆ. ವೇಗವಾಗಿ ಬಂದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವೈದ್ಯ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರ ಬಳಿಯ ಚೆನ್ನೈ-ಬೆಂಗಳೂರು ಎಕ್ಸ್ ಪ್ರೆಸ್ ವೇಯಲ್ಲಿ ನಡೆದಿದೆ.
ಕೃಷ್ಣ ಜಗನ್ ಮೃತ ವೈದ್ಯ. ಆಂಧ್ರಪ್ರದೇಶ ಮೂಲದ ಕೃಷ್ಣ ಜಗನ್ ಅನಂತಪುರಂ ನಿಂದ ಕುಪ್ಪ ಪಿಇಎಸ್ ಕಾಲೇಜಿಗೆ ತೆರಳುತ್ತಿದ್ದರು. ಈ ವೇಳೆ ಚೆನ್ನೈ-ಬೆಂಗಳೂರು ಎಕ್ಸ್ ಪ್ರೆಸ್ ಕಾರಿಡಾರ್ ವೇಯಲ್ಲಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ಅತಿಯಾದ ವೇಗವೇ ಅಪಘತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಬಂಗಾರಪೇಟೆ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.