HomeIndiaSHOCKING: ವಿಮಾನದ ತುರ್ತು ನಿರ್ಗಮನದ ಡೋರ್ ತೆಗೆದು ಏಕಾಏಕಿ ಕೆಳಗೆ ಜಿಗಿದ ಪ್ರಯಾಣಿಕ: ಬೆಚ್ಚಿಬಿದ್ದ ಸಿಬ್ಬಂದಿ

SHOCKING: ವಿಮಾನದ ತುರ್ತು ನಿರ್ಗಮನದ ಡೋರ್ ತೆಗೆದು ಏಕಾಏಕಿ ಕೆಳಗೆ ಜಿಗಿದ ಪ್ರಯಾಣಿಕ: ಬೆಚ್ಚಿಬಿದ್ದ ಸಿಬ್ಬಂದಿ

ಚೆನ್ನೈ: ಚಲಿಸುತ್ತಿದ್ದ ವಿಮಾನದಿಂದ ತುರ್ತು ನಿರ್ಗಮನದ ಡೋರ್ ತೆರೆದ ಪ್ರಯಾಣಿಕನೊಬ್ಬ ಏಕಾಏಕಿ ಕೆಳಗೆ ಹಾರಿದ ಘಟನೆ ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಶಾರ್ಜಾದಿಂದ ಚೆನ್ನೈಗೆ ಆಗಮಿಸುತ್ತಿದ್ದ ಏರ್ ಅರೇಬಿಯಾ ವಿಮಾನದಲ್ಲಿ ಈ ಘಟನೆ ನಡೆದಿದ್ದು, ಅನಿರೀಕ್ಷಿತ ಘಟನೆಯಿಂದಾಗಿ ವಿಮಾನಯಾನ ಸಿಬ್ಬಂದಿ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾರ್ಜಾ-ಚೆನ್ನೈ ಏರ್ ಅರೇಬಿಯಾ ವಿಮಾನವು ಇಂದು ಮುಂಜಾನೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿ ರನ್‌ವೇಯಲ್ಲಿ ಇಳಿದು ಟ್ಯಾಕ್ಸಿವೇಯಲ್ಲಿ ನಿಧಾನವಾಗಿ ಚಲಿಸುತ್ತಿತ್ತು. ವಿಮಾನವು ಪಾರ್ಕಿಂಗ್ ಬೇ ತಲುಪುವ ಮೊದಲೇ, ವಿಮಾನದಲ್ಲಿದ್ದ ಪ್ರಯಾಣಿಕನೊಬ್ಬ ತುರ್ತು ನಿರ್ಗಮನ ಬಾಗಿಲನ್ನು ತೆರೆದು ಹೊರಗೆ ಜಿಗಿದಿದ್ದಾನೆ. ವಿಮಾನ ನಿಲ್ಲುವ ಮೊದಲೇ ವ್ಯಕ್ತಿ ಕೆಳಗೆ ಹಾರಿದ್ದಾನೆ.

ಮಾಹಿತಿಯ ಪ್ರಕಾರ, ಪ್ರಯಾಣಿಕ ವಿಮಾನ ಹಾರಾಟದ ವೇಳೆ ಅಸ್ವಸ್ಥನಾಗಿದ್ದ ಎನ್ನಲಾಗಿದೆ. ಪ್ರಯಾಣದ ಸಮಯದಲ್ಲಿ ಆತ ತನಗೆ ವಾಂತಿ ಬರುತ್ತಿದೆ ಎಂದು ಹೇಳಿದ್ದ. ವಿಮಾನದ ಒಳಗೆ ಎರಡು ಬಾರಿ ವಾಂತಿ ಮಾಡಿಕೊಂಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಂತಿಯಾಗುತ್ತಿದ್ದ ಕಾರಣ ಹಾಗೂ ಮಾನಸಿಕ ಒತ್ತಡದಿಂದಾಗಿ ಆತ ಈ ರೀತಿ ವರ್ತಿಸಿರಬಹುದು ಎಂದು ಶಂಕಿಸಲಾಗಿದೆ.

ಘಟನೆ ನಡೆದ ಕೂಡಲೇ ವಿಮಾನದ ಪೈಲಟ್ ನೆಲದ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದರು. ಕೂಡಲೇ ಕಾರ್ಯಪ್ರವೃತ್ತರಾದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ವ್ಯಕ್ತಿಯನ್ನು ವಶಕ್ಕೆ ಪಡೆದರು. ಹೆಚ್ಚಿನ ತನಿಖೆಗಾಗಿ ಆತನನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಪ್ರಯಾಣಿಕ ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ನಿವಾಸಿ ಎಂದು ತಿಳಿದುಬಂದಿದೆ.

ಘಟನೆಯಿಂದಾಗಿ ಭದ್ರತಾ ದೃಷ್ಟಿಯಿಂದ ಮುಖ್ಯ ರನ್‌ವೇಯನ್ನು ಬೆಳಗ್ಗೆ 03.23 ರಿಂದ 04.23 ರವರೆಗೆ ಮುಚ್ಚಲಾಗಿತ್ತು. ವಿಮಾನಗಳ ಸಂಚಾರವನ್ನು ಎರಡನೇ ರನ್‌ವೇಗೆ ತಿರುಗಿಸಲಾಯಿತು.

ಅದೃಷ್ಟವಶಾತ್, ಈ ಘಟನೆಯಲ್ಲಿ ವಿಮಾನಕ್ಕೆ ಯಾವುದೇ ಹಾನಿಯಾಗಿಲ್ಲ. ಸಿಬ್ಬಂದಿ ಮತ್ತು ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular