ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ, ಅವರಿಗೆ 85 ವರ್ಷ ವಯಸ್ಸಾಗಿತ್ತು.
ಚೆನ್ನಮ್ಮ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಆರೋಗ್ಯ ಏರುಪೇರಾದ ಹಿನ್ನೆಲೆಯಲ್ಲಿ ಬುಧವಾರ ಸಂಜೆ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ವೇಳೆಯೇ ಅವರಿಗೆ ಹೃದಯಾಘಾತ ಸಂಭವಿಸಿತ್ತು. ಇದೀಗ ಮಣಿಪಾಲ್ ಆಸ್ಪತ್ರೆಯಲ್ಲಿಯೇ ಚೆನ್ನಮ್ಮ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಎರಡು ದಿನಗಳಿಂದ ಚೆನ್ನಮ್ಮ ಆರೋಗ್ಯದ ಸ್ಥಿತಿ ಗಂಭೀವಾಗಿದೆ ಎಂದು ಹೇಳಲಾಗಿತ್ತು. ಆದರೆ ಇಂದು ಬೆಳಿಗ್ಗೆ ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ.ಸತ್ಯನಾರಾಯಣ ಚೆನ್ನಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿ ಅವರ ಆರೋಗ್ಯದಲ್ಲಿ ಶುಕ್ರವಾರಕ್ಕಿಂತ ಇಂದು ಸುಧಾರಣೆ ಕಂಡುಬಂದಿದೆ ಎಂದು ತಿಳಿಸಿದ್ದರು. ಆದರೆ ಇದೀಗ ಚೆನ್ನಮ್ಮ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಚೆನ್ನಮ್ಮ ನಿಧನ ಸುದ್ದಿ ಬೆನ್ನಲ್ಲೇ ದೇವೇಗೌಡರ ಕುಟುಂಬ ಸದಸ್ಯರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.

