ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆ ಪ್ರಕಟಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಚೆಕ್ ಬೌನ್ಸ್ ಕೇಸ್ ನಲ್ಲಿ 1 ಕೋಟಿ 25 ಲಕ್ಷ ದಂಡ ಪಾವತಿಸುವಂತೆ ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳಿಗೆ ಕೋರ್ಟ್ ಸೂಚಿಸಿದೆ. ದಂಡ ಪಾವತಿಸದಿದ್ದರೆ 1 ವರ್ಷ ಜೈಲು ಶಿಕ್ಷೆ ಅನುಭವಿಸಲು 42ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
ವಿಎಸ್ ಎಲ್ ಸ್ಟೀಲ್ಸ್ ಲಿಮಿಟೆಡ್ ಮಾಜಿ ಸಚಿವ ನಾಗೇಂದ್ರ ಸೇರಿದಂತೆ ಮೂವರ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಿಸಿತ್ತು. ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಬಿ.ನಾಗೇಂದ್ರ, ಬಿ.ಸಿ.ಇನ್ಫ್ರಾಸ್ಟ್ರಕ್ಚರ್, ಅನಿಲ್ ರಾಜಶೇಖರ್ ಚಂಡೂರು ಭಾಸ್ಕರ್ ಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.