HomeIndiaಟ್ರಕ್ ಗೆ ಆಟೋ ಡಿಕ್ಕಿ: 7 ವಿದ್ಯಾರ್ಥಿಗಳು ಸಾವು

ಟ್ರಕ್ ಗೆ ಆಟೋ ಡಿಕ್ಕಿ: 7 ವಿದ್ಯಾರ್ಥಿಗಳು ಸಾವು

ಛತ್ತೀಸ್‌ ಗಢದ ಕಂಕೇರ್ ಜಿಲ್ಲೆಯಲ್ಲಿ ಗುರುವಾರ ಆಟೋವೊಂದು ಟ್ರಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 7 ಶಾಲಾ ಮಕ್ಕಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಂಕೇರ್ ಜಿಲ್ಲೆಯ ಕೊರಾರ್ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಗಾಯಾಳುಗಳನ್ನು ಕೊರಾರ್ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಂಕೇರ್ ಜಿಲ್ಲೆಯ ಕೊರಾರ್ ಚಿಲ್ಹಾಟಿ ಚೌಕ್‌ ನಲ್ಲಿ ಆಟೋ ರಿಕ್ಷಾ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ ಶಾಲಾ ಮಕ್ಕಳು ಸಾವನ್ನಪ್ಪಿದ ಸುದ್ದಿ ಹೃದಯ ವಿದ್ರಾವಕವಾಗಿದೆ, ಘಟನೆಯಲ್ಲಿ ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಆರೋಗ್ಯ ಇಲಾಖೆಯಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುತ್ತಿದೆ. ಅವರಿಗೆ, ಮೃತರ ಕುಟುಂಬಗಳಿಗೆ ದೇವರು ಧೈರ್ಯ ನೀಡಲಿ. ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಆಡಳಿತಕ್ಕೆ ಸೂಚನೆಗಳನ್ನು ನೀಡಲಾಗಿದೆ ಎಂದು ಛತ್ತೀಸ್‌ ಗಢ ಸಿಎಂ ಭೂಪೇಶ್ ಬಘೇಲ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular