HomeIndiaತಡರಾತ್ರಿ ಭೀಕರ ಅಪಘಾತದಲ್ಲಿ 9 ಜನ ಸಾವು: 23 ಮಂದಿ ಗಾಯ

ತಡರಾತ್ರಿ ಭೀಕರ ಅಪಘಾತದಲ್ಲಿ 9 ಜನ ಸಾವು: 23 ಮಂದಿ ಗಾಯ

ಛತ್ತೀಸ್‌ಗಢದ ಬೆಮೆತಾರಾ ಜಿಲ್ಲೆಯಲ್ಲಿ ಸರಕು ಸಾಗಣೆ ವಾಹನವು ಟ್ರಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 23 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸಂತ್ರಸ್ತರು ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದರು. ಕಥಿಯಾ ಗ್ರಾಮದ ಬಳಿ ಭಾನುವಾರ ತಡರಾತ್ರಿ ಈ ದುರಂತ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಮಿನಿ ಲಾರಿಗೆ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದಿದೆ.

ಪಥರಾ ಗ್ರಾಮದವರಾದ ಸಂತ್ರಸ್ತರು ತಿರೈಯಾ ಗ್ರಾಮದಲ್ಲಿ ನಡೆದ ಕುಟುಂಬ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದರು. ತೀವ್ರವಾಗಿ ಗಾಯಗೊಂಡವರನ್ನು ರಾಯ್‌ಪುರದ ಏಮ್ಸ್‌ಗೆ ಸ್ಥಳಾಂತರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತರನ್ನು ಭೂರಿ ನಿಶಾದ್(50), ನೀರಾ ಸಾಹು(55), ಗೀತಾ ಸಾಹು(60), ಅಗ್ನಿಯಾ ಸಾಹು(60), ಖುಷ್ಬು ಸಾಹು(39), ಮಧು ಸಾಹು(5), ರಿಕೇಶ್ ನಿಶಾದ್(6) ಮತ್ತು ಟ್ವಿಂಕಲ್ ನಿಶಾದ್(6) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆರಂಭದಲ್ಲಿ ಎರಡು ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ನಂತರ ತೀವ್ರವಾಗಿ ಗಾಯಗೊಂಡ ನಾಲ್ವರನ್ನು ರಾಯ್‌ಪುರದ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ಗೆ ವರ್ಗಾಯಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular