HomeIndiaBREAKING NEWS: ವಿದ್ಯುತ್ ಟ್ರಾನ್ಸ್ ಫಾರ್ಮರ್ ಘಟಕದಲ್ಲಿ ಭಾರಿ ಅಗ್ನಿ ಅನಾಹುತ; ಮುಗಿಲೆತ್ತರಕ್ಕೆ ವ್ಯಾಪಿಸಿದ ಬೆಂಕಿ...

BREAKING NEWS: ವಿದ್ಯುತ್ ಟ್ರಾನ್ಸ್ ಫಾರ್ಮರ್ ಘಟಕದಲ್ಲಿ ಭಾರಿ ಅಗ್ನಿ ಅನಾಹುತ; ಮುಗಿಲೆತ್ತರಕ್ಕೆ ವ್ಯಾಪಿಸಿದ ಬೆಂಕಿ ಕೆನ್ನಾಲಿಗೆ

ರಾಯ್ಪುರ: ವಿದ್ಯುತ್ ಟ್ರಾನ್ಸ್ ಫಾರ್ಮರ್ ಘಟಕದಲ್ಲಿ ಅಗ್ನಿ ಅನಾಹುತ ಸಂಭವಿಸಿರುವ ಘಟನೆ ಛತ್ತೀಸ್ ಗಢದ ರಾಯ್ಪುರದಲ್ಲಿ ನಡೆದಿದೆ.

ವಿದ್ಯುತ್ ಟ್ರಾನ್ಸ್ ಫಾರ್ಮರ್ ಘಟಕದಲ್ಲಿ ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಟ್ರಾನ್ಸ್ ಫಾರ್ಮರ್ ಗಳು ಹೊತ್ತಿ ಉರಿದಿದ್ದು, ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದೆ.

ಟ್ರಾನ್ಸ್ ಫಾರ್ಮರ್ ಘಟಕದಲ್ಲಿ ಆಯಿಲ್ ಡ್ರಮ್ ಗಳು ಇರುವುದರಿಂದ ಬೆಂಕಿಯ ತೀವ್ರತೆ ಇನ್ನಷ್ಟು ಹೆಚ್ಚಾಗಿದೆ. ತಕ್ಷಣ ಸ್ಥಳಕ್ಕಾಗಮಿಸಿದ 10ಕ್ಕೂ ಹೆಚ್ಚು ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ತಹಬದಿಗೆ ತರಲು ಯತ್ನಿಸಿವೆ. ಮುಂಜಾಗೃತಾ ಕ್ರಮವಾಗಿ ಸುತ್ತಮುತ್ತಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular