ಛತ್ತೀಸ್ ಗಢದ ಬಿಜಾಪುರದಲ್ಲಿ ಇಬ್ಬರು ನಕ್ಸಲರನ್ನು ಭದ್ರತಾಪಡೆ ಸಿಬ್ಬಂದಿ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ.
ಬಿಜಾಪುರ ಜಿಲ್ಲೆಯ ಕೊಲ್ನಾರ್ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಪಡೆ, ಸಿಆರ್ ಪಿಎಫ್ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚಾರಣೆಯಲ್ಲಿ ಇಬ್ಬರು ನಕ್ಸಲರನ್ನು ಸದೆಬಡಿಯಲಾಗಿದೆ. ನಕ್ಸಲರ ಅಡಗುದಾಣಗಳ ಮೇಲೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಎರಡೂಕಡೆಯಿಂದ ಗುಂಡಿನ ಚಕಮಕಿ ನಡೆದಿದೆ.
ಇಬ್ಬರು ನಕ್ಸಲರು ಭದ್ರತಾಪಡೆ ಗುಂಡೇಟಿಗೆ ಬಲಿಯಾಗಿದ್ದಾರೆ. ಸ್ಥಳದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.