ಸುಕ್ಮಾ: ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾಪಡೆಗಳು ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ನಕ್ಸಲರನ್ನು ಹತ್ಯೆ ಮಾಡಲಾಗಿದೆ.
ಕಿಸ್ತಾರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಭದ್ರತಾ ಪಡೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದವು. ಈ ವೇಳೆ ಭದ್ರತಾಪಡೆ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ.
ನಕ್ಸಲರ ವಿರುದ್ಧ ಎನ್ ಕೌಂಟರ್ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ, ಇಬ್ಬರು ನಕ್ಸಲರನ್ನು ಸದೆಬಡಿದಿದೆ. ಹತ್ಯೆಯಲ್ಲಿ ನಕ್ಸಲ್ ಕಮಾಂಡರ್ ಆಶಾ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ.
ಆಶಾ ಸುಳಿವು ನಿಡಿದವರಿಗೆ 14 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಛತ್ತೀಸ್ ಗಢದಲ್ಲಿ ‘ಕೆಬಿ’ ಹೆಸರಲ್ಲಿ ನಕ್ಸಲ್ ಸಂಘಟನೆಯನ್ನು ಆಶಾ ಕಟ್ಟುತ್ತಿದ್ದರು. ಇದೀಗ ಎನ್ ಕೌಂಟರ್ ಕಾರ್ಯಾಚರಣೆಯಲ್ಲಿ ಆಶಾ ಸೇರಿದಂತೆ ಇಬ್ಬರನ್ನು ಹತ್ಯೆಗೈಯ್ಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.