BREAKING: ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಕಿಡಿಗೇಡಿ ಅರೆಸ್ಟ್

ಮುಂಬೈ: ಮೂರು ವಿಮಾನಗಳನ್ನು ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ ಕರೆಗಳನ್ನು ಮಾಡಿದ ಆರೋಪದ ಮೇಲೆ ಮುಂಬೈ ಪೊಲೀಸರು ಛತ್ತೀಸ್‌ಗಢದ ಬಾಲಕನನ್ನು ಬುಧವಾರ ಬಂಧಿಸಿದ್ದಾರೆ.

ಬೆದರಿಕೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದ್ದು, ಮುಂಬೈಗೆ ತೆರಳುವ ವಿಮಾನಗಳಲ್ಲಿ ಸಂಭಾವ್ಯ ಬಾಂಬ್‌ಗಳ ಬಗ್ಗೆ ದೂರುಗಳು ಬಂದಿವೆ.

ತನಿಖೆಯ ನಂತರ, ಬೆದರಿಕೆಯ ಹಿಂದೆ ಅಪ್ರಾಪ್ತ ಬಾಲಕನ ಕೈವಾಡವಿದೆ ಎಂದು ಗೊತ್ತಾಗಿದೆ. ಹುಡುಗನಿಗೆ ಹಣದ ವಿಷಯದಲ್ಲಿ ಸ್ನೇಹಿತನೊಂದಿಗೆ ಭಿನ್ನಾಭಿಪ್ರಾಯವಿತ್ತು. ಪ್ರತೀಕಾರವಾಗಿ, ಅವನು ತನ್ನ ಸ್ನೇಹಿತನ ಫೋಟೋವನ್ನು ಬಳಸಿಕೊಂಡು ಆನ್‌ಲೈನ್‌ನಲ್ಲಿ ಬೆದರಿಕೆ ಹಾಕಿದ್ದಾನೆ. ಪೊಲೀಸರು ಬಾಲಕನನ್ನು ಬಂಧಿಸಿ, ಪೋಷಕರಿಗೆ ತಿಳಿಸಿದ ನಂತರ ಬಾಲನ್ಯಾಯ ಮಂಡಳಿಗೆ ಒಪ್ಪಿಸಿದ್ದಾರೆ.

ಈ ಘಟನೆಯು ಇತ್ತೀಚಿನ ಇತರ ಸುಳ್ಳು ಬಾಂಬ್ ಬೆದರಿಕೆಗಳೊಂದಿಗೆ ಸಂಪರ್ಕ ಹೊಂದಿದೆಯೇ ಎಂದು ಪೊಲೀಸರು ಈಗ ತನಿಖೆ ನಡೆಸುತ್ತಿದ್ದಾರೆ. ಏಕೆಂದರೆ ಕಳೆದ ಮೂರು ದಿನಗಳಲ್ಲಿ ಸುಮಾರು 12ಕ್ಕೂ ಅಧಿಕ ಭಾರತೀಯ ವಿಮಾನಗಳು, ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳಿಗೆ ಇದೇ ರೀತಿಯ ಬೆದರಿಕೆಗಳು ಬಂದಿವೆ.

ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಅಂತಹ ಘಟನೆಗಳನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸಾರ್ವಜನಿಕರಿಗೆ ಭರವಸೆ ನೀಡಿದ್ದಾರೆ.

ಮೂರು ವಿಮಾನಗಳಿಗೆ ಬಾಂಬ್ ಬೆದರಿಕೆಗಳನ್ನು ನೀಡಿದ ಅಪ್ರಾಪ್ತ ವಯಸ್ಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಭಾಗಿಯಾಗಿರುವ ಎಲ್ಲರನ್ನು ಗುರುತಿಸಿ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read