ಕರ್ವ ನವನೀತ್ ನಿರ್ದೇಶನದ ಶರಣ್ ಅಭಿನಯದ ‘ಛೂ ಮಂತರ್’ ಇನ್ನೇನು ತೆರೆ ಮೇಲೆ ಬರಲು ಸಚ್ಚಾಗಿದ್ದು, ಚಿತ್ರ ತಂಡ ಇದೇ ಡಿಸೆಂಬರ್ 9ರಂದು ಟೀಸರ್ ರಿಲೀಸ್ ಮಾಡುವ ಮೂಲಕ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.
ಈ ಚಿತ್ರವನ್ನು ತರುಣ್ ಸ್ಟುಡಿಯೋಸ್ ಬ್ಯಾನರ್ ನಲ್ಲಿ ದಂಪತಿಗಳಾದ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಾಣ ಮಾಡಿದ್ದು, ಶರಣ್, ಅದಿತಿ ಪ್ರಭುದೇವ, ಮೇಘನಾ ಗಾಂವ್ಕರ್ ಹಾಗೂ ಚಿಕ್ಕಣ್ಣ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಂದನ್ ಶೆಟ್ಟಿ ಮ್ಯೂಸಿಕ್ ಕಂಪೋಸ್ ಮಾಡಿದ್ದು, ವೆಂಕಿ UDV ಸಂಕಲನ, ಅನುಪ್ ಕಟ್ಟುಕರನ್ ಛಾಯಾಗ್ರಹಣ, ಡಾ.ಕೆ ರವಿವರ್ಮ ಸಾಹಸ ನಿರ್ದೇಶನ ಹಾಗೂ ದರ್ಶಿನಿ ಡೆಲ್ಟಾ ನಾಗರಾಜ್ ಅವರ ನೃತ್ಯ ನಿರ್ದೇಶನವಿದೆ.