HomeBusinessಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಗಗನಕ್ಕೇರಿದ ಕೋಳಿ ಮಾಂಸ ದರ, ಕೆಜಿಗೆ 300 ರೂ.

ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಗಗನಕ್ಕೇರಿದ ಕೋಳಿ ಮಾಂಸ ದರ, ಕೆಜಿಗೆ 300 ರೂ.

ಬೆಂಗಳೂರು: ರಾಜ್ಯದಲ್ಲಿ ಬರ, ಬಿರು ಬಿಸಿಲ ಕಾರಣದಿಂದ ಕುಕ್ಕುಟೋದ್ಯಮ ತತ್ತರಿಸಿ ಹೋಗಿದೆ. ಮಳೆ ಇಲ್ಲದ ಪರಿಣಾಮ ಕೋಳಿಯ ಆಹಾರಗಳಿಗೆ ಬಳಸುವ ಸೋಯಾ ಮೊದಲಾದ ಬೆಳೆಗಳ ಪ್ರಮಾಣ ಕಡಿಮೆಯಾಗಿ ಕೋಳಿ ಮಾಂಸದ ದರ ದಿನೇ ದಿನೇ ಏರಿಕೆ ಕಾಣತೊಡಗಿದೆ.

ಚಿಕನ್ ದರ ಭಾರಿ ಏರಿಕೆ ಪರಿಣಾಮ ಕೋಳಿ ಮಾಂಸ ಪ್ರಿಯರಿಗೆ ಶಾಕ್ ನೀಡಿದೆ. ಒಂದು ಕೆಜಿ ಕೋಳಿ ಮಾಂಸದ ದರ ರಾಜ್ಯದ ವಿವಿಧಡೆ 300 ರೂ. ತಲುಪಿದೆ. ರಾಜ್ಯದಲ್ಲಿ ಸುಮಾರು 40 ಸಾವಿರ ಕೋಳಿ ಸಾಕಾಣೆದಾರರಿದ್ದು, ಪ್ರತಿವಾರ 80 ಲಕ್ಷ ಕೋಳಿ ಉತ್ಪಾದನೆ ಮಾಡಲಾಗುತ್ತದೆ. ಸುಮಾರು 1.7 ಕೋಟಿ ಕೆಜಿ ಕೋಳಿ ಮಾಂಸ ಉತ್ಪಾದನೆ ಆಗುತ್ತದೆ. ಪ್ರತಿ ಕೆಜಿ ಕೋಳಿ ಉತ್ಪಾದನೆಗೆ ಈ ಹಿಂದೆ 60 ರಿಂದ 70 ರೂ. ವೆಚ್ಚ ಆಗುತ್ತಿತ್ತು. ಈಗ 100 ರೂಪಾಯಿವರೆಗೆ ಖರ್ಚಾಗುತ್ತಿದೆ.

ಮಾರುಕಟ್ಟೆಯಲ್ಲಿ ಕೋಳಿ ಮಾಂಸಕ್ಕೆ ಬೇಡಿಕೆ ಹೆಚ್ಚಾಗಿದ್ದು, ಬೇಡಿಕೆಯ ಪರಿಣಾಮ ದರ ಏರಿಕೆಯಾಗಿ 300 ರೂಪಾಯಿ ಗಡಿ ತಲುಪಿದೆ. ರಾಜ್ಯದಲ್ಲಿ ಶೇಕಡ 30ರಷ್ಟು ಕೋಳಿ ಶೆಡ್ ಗಳು ಖಾಲಿಯಾಗಿವೆ. ಕೋಳಿ ಸಾಕಾಣೆದಾರರು, ಕಂಪನಿಗಳಿಗೂ ಬೆಲೆ ಏರಿಕೆ ಬಿಸಿ ತಟ್ಟಿದೆ. ವಿದ್ಯುತ್ ದರ ಕೂಡ ಹೆಚ್ಚಳ ಆಗಿದೆ. ಬಿಸಿಲು ಹೆಚ್ಚಾದ ಪರಿಣಾಮ ಕೋಳಿ ಮಾಂಸ ಉತ್ಪಾದನೆ ವಿಳಂಬವಾಗುತ್ತಿದೆ. ಹೊರ ರಾಜ್ಯಗಳಲ್ಲೂ ಕೂಡ ಕೋಳಿ ಉತ್ಪಾದನೆ ಕುಸಿತವಾಗಿ ಬೇಡಿಕೆ ಹೆಚ್ಚಾಗಿದೆ. ಇದರ ಪರಿಣಾಮ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಚಿಕನ್ ದರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular