HomeKarnatakaಬರ ಪರಿಹಾರ ನೀಡುವಾಗ ಪಾರದರ್ಶಕತೆ ಇರಬೇಕು, ಅಕ್ರಮ ನಡೆದರೆ ಅಧಿಕಾರಿಗಳೇ ಹೊಣೆ: ಸಿಎಂ ಡಿ.ಕೆ. ಶಿವಕುಮಾರ್...

ಬರ ಪರಿಹಾರ ನೀಡುವಾಗ ಪಾರದರ್ಶಕತೆ ಇರಬೇಕು, ಅಕ್ರಮ ನಡೆದರೆ ಅಧಿಕಾರಿಗಳೇ ಹೊಣೆ: ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಬಾಗಲಕೋಟೆ: ಯಾವುದೇ ಫಲಾನುಭವಿಗೆ ಬರ ಪರಿಹಾರ ನೀಡುವಾಗ ಪಾರದರ್ಶಕತೆ ಇರಬೇಕು. ಯಾವುದೇ ಅಕ್ರಮ ನಡೆದರೂ ಅದಕ್ಕೆ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಬಾಗಲಕೋಟೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಬರ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ರೈತರ ನೋವನ್ನು ದೂರ ಮಾಡೋಣ; ಬರ ಪರೀಕ್ಷೆಯನ್ನು ಎದುರಿಸೋಣ. ರೈತರ ನೋವನ್ನು ಸರ್ಕಾರ ಹಾಗೂ ಅಧಿಕಾರಿಗಳು ಸೇರಿ ದೂರ ಮಾಡಬೇಕು. ಬರ ಪರಿಸ್ಥಿತಿ ಬಾಗಲಕೋಟೆ ಜಿಲ್ಲೆಯ ಸಾಕಷ್ಟು ಕಡೆ ಆವರಿಸಿದೆ. ಗದಗ ಜಿಲ್ಲೆಯ 1 ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಲಾಗಿದೆ. ಗದಗ ಜಿಲ್ಲೆಯ 6 ತಾಲೂಕುಗಳ ಪರಿಸ್ಥಿತಿ ಬಾಗಲಕೋಟೆಗಿಂತ ಭೀಕರವಾಗಿದೆ. ಇಲ್ಲಿ ಅರ್ಧ ಭಾಗ ಹಸಿರಾಗಿದ್ದರೆ, ಇನ್ನರ್ಧ ಭಾಗದಲ್ಲಿ ಹಸಿರಿಲ್ಲ. ರೈತರ ನೋವು ನಿವಾರಣೆಗೆ ಸರ್ಕಾರ ಮತ್ತು ಅಧಿಕಾರಿಗಳು ಒಗ್ಗಟ್ಟಾಗಿ ಕೆಲಸ ಮಾಡಬೇಕು. ಬರದ ನೈಜ ಪರಿಸ್ಥಿತಿಯನ್ನು ಕೇಂದ್ರ ಅಧ್ಯಯನ ತಂಡಕ್ಕೆ ಮನವರಿಕೆ ಮಾಡಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈತರಿಗೆ ಪರಿಹಾರವನ್ನು ಹೇಗೆ ನೀಡಬೇಕೆಂದು ಎಲ್ಲರೂ ಸೇರಿ ಸಮಾಲೋಚಿಸಬೇಕು. ಬಾಗಲಕೋಟೆ ಜಿಲ್ಲೆಯಲ್ಲಿ 40% ಮಳೆ ಕೊರತೆಯಾಗಿದೆ. ದೇಶದಲ್ಲಿ 50 ವರ್ಷಗಳಲ್ಲೇ ಭೀಕರ ಬರ ಪರಿಸ್ಥಿತಿ ಎದುರಾಗಿದೆ. ಜೊತೆಗೆ, ಬರದ ಮುನ್ಸೂಚನೆ ಕುರಿತು ಪ್ರಧಾನಮಂತ್ರಿಗಳೂ ಸಹ ಗಮನ ಸೆಳೆದಿದ್ದರು. ಅಧಿಕಾರಿಗಳು ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಕುಡಿಯುವ ನೀರಿಗಾಗಿ ಪ್ರತಿ ಕ್ಷೇತ್ರಕ್ಕೆ 1 ಕೋಟಿ ರೂ. ನೀಡಲಾಗಿದೆ. ಜಿಲ್ಲಾಧಿಕಾರಿಗಳು ಪಿಡಿ ಖಾತೆಯಲ್ಲಿರುವ ಹಣವನ್ನು ಸರಿಯಾಗಿ ಬಳಸಿಕೊಳ್ಳಬೇಕು. ಜಿಲ್ಲಾಧಿಕಾರಿಗಳು, ಸಿಇಒ ಹಾಗೂ ಅಧಿಕಾರಿಗಳು ಕ್ಷೇತ್ರ ವೀಕ್ಷಣೆ ಮಾಡಬೇಕು ಎಂದು ಸೂಚಿಸಿದ್ದಾರೆ.

 ಮೇವು ಕಿಟ್‌ಗಳನ್ನು ನೀಡಬೇಕು. ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಅಧಿಕಾರಿಗಳು ಜನರನ್ನು ತಲುಪಬೇಕು. ಜಿಲ್ಲಾ ಕೇಂದ್ರದಲ್ಲೇ ಅಧಿಕಾರಿಗಳು ವಾಸ್ತವ್ಯ ಹೂಡಬೇಕು. ರೈತರಿಗೆ ಗೌರವದಿಂದ ಸ್ಪಂದಿಸಿ, ಕೈಗೊಂಡಿರುವ ಕೆಲಸಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು. ನೀವು ಜನರಿಗೆ ತಾಳ್ಮೆಯಿಂದ ಪ್ರತಿಕ್ರಿಯೆ ನೀಡಿದರೆ ಸರ್ಕಾರಕ್ಕೂ ಒಳ್ಳೆಯದಾಗಲಿದೆ ಎಂದು ಹೇಳಿದ್ದಾರೆ.

 ಬೆಳೆ ವಿಮೆ ಕುರಿತು ಜಿಲ್ಲೆಯಲ್ಲಿ ಸಾಕಷ್ಟು ದೂರುಗಳು ಬಂದಿವೆ. ಏಜೆಂಟರು ರೈತರನ್ನು ದಾರಿ ತಪ್ಪಿಸುವ ಕೆಲಸಕ್ಕೆ ಕಡಿವಾಣ ಹಾಕಬೇಕು. ಕೆಲವು ಫೈನಾನ್ಸ್ ಕಂಪನಿಗಳ ಮೀಟರ್ ಬಡ್ಡಿ ದಂಧೆಯನ್ನು ನಿಲ್ಲಿಸಲು ಪೊಲೀಸರು ಮುಂದಾಗಬೇಕು. ಅಮಾಯಕರು ಈ ಜಾಲಕ್ಕೆ ಸಿಲುಕಿಕೊಳ್ಳದಂತೆ ನಿಗಾವಹಿಸಬೇಕು. ಕಂದಾಯ, ಸಮಾಜ ಕಲ್ಯಾಣ, ಪಿಡಿಒ ಸೇರಿದಂತೆ ಜನರ ನಡುವೆ ಕೆಲಸ ಮಾಡುವ ಅಧಿಕಾರಿಗಳು ಜಿಲ್ಲೆಯಲ್ಲಿ ಎಲ್ಲಿರುತ್ತಾರೆ ಎಂಬ ಮಾಹಿತಿ ಇರಬೇಕು. ಪ್ರವಾಸ ಕಾರ್ಯಕ್ರಮ, ದೂರವಾಣಿ ಸಂಖ್ಯೆ ಸೇರಿದಂತೆ ಎಲ್ಲದರ ಮಾಹಿತಿಯು ನಿಖರವಾಗಿ ನವೀಕೃತವಾಗಿರಬೇಕು. ಡ್ಯಾಶ್‌ಬೋರ್ಡ್ ಮುಖಾಂತರ ಬರದ ಮಾಹಿತಿ ಸೇರಿದಂತೆ ಜನರಿಗೆ ಹಾಗೂ ರೈತರಿಗೆ ಅನುಕೂಲವಾಗುವಂತಹ ಮಾಹಿತಿಗಳನ್ನು ನೀಡಬೇಕು ಎಂದು ತಿಳಿಸಿದ್ದಾರೆ.

ಜಮೀನುಗಳನ್ನು ಗುರುತಿಸಿ, ಪ್ರತಿ ತಾಲೂಕಿನಲ್ಲಿ ನಿವೇಶನ ರಹಿತರಿಗೆ ನಿವೇಶನ ಹಂಚುವ ಕೆಲಸ ಮಾಡಬೇಕು. ಪ್ರತಿ ತಾಲೂಕಿನಲ್ಲಿ 50 ಸಾವಿರ ನಿವೇಶನಗಳನ್ನು ಹಂಚುವ ಗುರಿಯಿದೆ. ತೇಗದ ಸಿರಿ ಯೋಜನೆಯಡಿ ರಸ್ತೆಗಳ ಪಕ್ಕದ ಜಮೀನಿನಲ್ಲಿ ತೇಗದ ಸಸಿಗಳನ್ನು ನೆಟ್ಟು, ರೈತರು ಅವುಗಳನ್ನು ಆರೈಕೆ ಮಾಡುವ ನೂತನ ಆಲೋಚನೆ ಸರ್ಕಾರಕ್ಕಿದೆ. ಇದರಿಂದ ಬರುವ ಲಾಭದಲ್ಲಿ ರೈತರಿಗೆ 70% ಹಾಗೂ ಸರ್ಕಾರಕ್ಕೆ 30% ಹಂಚಿಕೆ ಮಾಡಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular