HomeKarnatakaBIG NEWS: ಎಪಿಎಂಸಿಗಳಲ್ಲಿ ರಾಜ್ಯದ ಸಾವಯವ ಉತ್ಪನ್ನ ಮಾರಾಟ: ಸಿಎಂ ಸಿದ್ದರಾಮಯ್ಯ

BIG NEWS: ಎಪಿಎಂಸಿಗಳಲ್ಲಿ ರಾಜ್ಯದ ಸಾವಯವ ಉತ್ಪನ್ನ ಮಾರಾಟ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ಆರ್ಥಿಕ ವರ್ಷದಿಂದ ಎಪಿಎಂಸಿಗಳಲ್ಲಿ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅರಮನೆ ಮೈದಾನದಲ್ಲಿ ಕೃಷಿ ಇಲಾಖೆ ಹಮ್ಮಿಕೊಂಡಿರುವ ಮೂರು ದಿನಗಳ ಅಂತರರಾಷ್ಟ್ರೀಯ ವಾಣಿಜ್ಯ ಮೇಳ, ಸಾವಯವ ಮತ್ತು ಸಿರಿಧಾನ್ಯ -2025 ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಸಿರಿಧಾನ್ಯ ಕೃಷಿ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲು ಬದ್ಧವಾಗಿದೆ ಎಂದು ಹೇಳಿದ್ದಾರೆ.

ಸಾವಯವ ಮತ್ತು ಸಿರಿಧಾನ್ಯಗಳಿಗೆ ವ್ಯವಸ್ಥಿತ ಮಾರುಕಟ್ಟೆ, ಸರಬರಾಜು ಸರಪಳಿ ಕಲ್ಪಿಸುವ ಉದ್ದೇಶದಿಂದ ಪರಿಷ್ಕೃತ ಸಾವಯವ ಕೃಷಿ ನೀತಿಯನ್ನು ನಮ್ಮ ಸರ್ಕಾರ 2017ರಲ್ಲಿ ಹೊರತಂದಿದೆ. ರಾಜ್ಯದ ರೈತರಲ್ಲಿ ಸಾವಯವ ಕೃಷಿ ಪದ್ಧತಿಯ ಬಗ್ಗೆ ಅರಿವು ಮೂಡಿಸಲು ಸಾವಯವ ಭಾಗ್ಯ ಯೋಜನೆಯನ್ನು 2013ರಲ್ಲಿ ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular