ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ ದೂರದೃಷ್ಟಿಯ ವ್ಯಕ್ತಿ: ರತನ್ ಟಾಟಾ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

ಬೆಂಗಳೂರು: ಭಾರತದ ಖ್ಯಾತ ಉದ್ಯಮಿ ರತನ್ ಟಾಟಾ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.

ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿ.

ರತನ್ ಟಾಟಾ ಅವರು ತಮ್ಮ ಬದುಕು ಮತ್ತು ಸಾಧನೆಗಳ ಮೂಲಕ ಅಜರಾಮರ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

https://twitter.com/siddaramaiah/status/1844089149025845362

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read