ಪದ್ಮಶ್ರೀ ಪುರಸ್ಕೃತ ಪರಿಸರ ಪ್ರೇಮಿ ತುಳಸಿಗೌಡ ನಿಧನಕ್ಕೆ ಸಿಎಂ ಸಂತಾಪ

ಪದ್ಮಶ್ರೀ ಪುರಸ್ಕೃತ ಪರಿಸರ ಪ್ರೇಮಿ ತುಳಸಿಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಲಕ್ಷಾಂತರ ಗಿಡಗಳನ್ನು ನೆಟ್ಟು, ನೀರೆರೆದ ಅಂಕೋಲಾ ತಾಲ್ಲೂಕು ಹೊನ್ನಳ್ಳಿಯ ಪರಿಸರಪ್ರೇಮಿ ತುಳಸಿಗೌಡ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಜೀವನ ನಿರ್ವಹಣೆಗಾಗಿ ಅರಣ್ಯ ಇಲಾಖೆಯಲ್ಲಿ ದಿನಗೂಲಿ ಕೆಲಸಕ್ಕೆ ಸೇರಿದ್ದ ತುಳಸಿಗೌಡ ಅವರು ನಿವೃತ್ತಿಯ ನಂತರವೂ ತಮ್ಮ ಪರಿಸರ ಕಾಳಜಿಯಿಂದ ವಿಮುಖರಾಗದೆ ಗಿಡನೆಡುವುದನ್ನು ಮುಂದುವರೆಸಿ, ಪದ್ಮಶ್ರೀಯಂತಹ ಅತ್ಯುನ್ನತ ಗೌರವಕ್ಕೆ ಪಾತ್ರರಾದವರು ಎಂದು ತಿಳಿಸಿದ್ದಾರೆ.

ತುಳಸಿಗೌಡ ಅವರ ಪರಿಸರದ ಬಗೆಗಿನ ಪ್ರೀತಿ – ಕಾಳಜಿಯನ್ನು ಸ್ಮರಿಸುತ್ತ, ಅಗಲಿದ ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಎಂದು ಸಿಎಂ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read