HomeKarnatakaಅಲ್ಪಸಂಖ್ಯಾತರಿಗೆ ಸಿಎಂ ಗುಡ್ ನ್ಯೂಸ್: ಹೆಚ್ಚಿನ ಅನುದಾನ, ಯೋಜನೆ ಪುನಾರಂಭ

ಅಲ್ಪಸಂಖ್ಯಾತರಿಗೆ ಸಿಎಂ ಗುಡ್ ನ್ಯೂಸ್: ಹೆಚ್ಚಿನ ಅನುದಾನ, ಯೋಜನೆ ಪುನಾರಂಭ

ಬೆಂಗಳೂರು: ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನಾರಂಭಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಮುಸ್ಲಿಂ ಚಿಂತಕರ ಚಾವಡಿ ಕೇಂದ್ರ ಮಂಡಳಿ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ವಿವಿಧ ಬೇಡಿಕೆ ಒಳಗೊಂಡ ಮನವಿ ಸಲ್ಲಿಸಲಾಗಿದ್ದು, ಈ ಸಂದರ್ಭದಲ್ಲಿ ಅವರು, ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮ ಪುನಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘೋಷಿಸಿದಂತೆ ಐದು ಗ್ಯಾರಂಟಿಗಳನ್ನು ಸರ್ಕಾರದಿಂದ ಅನುಷ್ಠಾನಕ್ಕೆ ತರಲಾಗುತ್ತಿದೆ. ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಲಾಗುತ್ತದೆ. ಮುಸ್ಲಿಂ ಸಮುದಾಯದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.

ವಸತಿ ಶಾಲೆ ಮತ್ತು ಜಿಲ್ಲೆಗೊಂದು ಅಲ್ಪಸಂಖ್ಯಾತ ಪಾಲಿಟೆಕ್ನಿಕ್ ಸ್ಥಾಪನೆಗೆ ನಿಯೋಗದಿಂದ ಮನವಿ ಮಾಡಲಾಗಿದ್ದು, ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular