HomeKarnatakaಸ್ತ್ರೀ ಶಕ್ತಿ ಮಹಿಳಾ ಸಂಘಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್: ಆಸ್ತಿ ತೆರಿಗೆ, ನೀರಿನ ಶುಲ್ಕ ವಸೂಲಿ...

ಸ್ತ್ರೀ ಶಕ್ತಿ ಮಹಿಳಾ ಸಂಘಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್: ಆಸ್ತಿ ತೆರಿಗೆ, ನೀರಿನ ಶುಲ್ಕ ವಸೂಲಿ ಜವಾಬ್ದಾರಿ

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿನ ನೀರಿನ ಬಿಲ್ ಮತ್ತು ಆಸ್ತಿ ತೆರಿಗೆ ಬಾಕಿ ವಸೂಲಾತಿ ಜವಾಬ್ದಾರಿಯನ್ನು ಮಹಿಳಾ ಸ್ವಸಹಾಯ ಗುಂಪು, ಸರ್ಕಾರೇತರ ಸಂಸ್ಥೆ ಹಾಗೂ ಸ್ತ್ರೀಶಕ್ತಿ ಗುಂಪುಗಳಿಗೆ ವಹಿಸಿಕೊಡಲು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ನೀರಿನ ಬಿಲ್, ಆಸ್ತಿ ತೆರಿಗೆ ಬಾಕಿ ವಸೂಲಿ ಮೊತ್ತದಲ್ಲಿ ಶೇ. 5ರಷ್ಟು ಪ್ರೋತ್ಸಾಹ ಧನವಾಗಿ ನೀಡಲು ನಿರ್ಧರಿಸಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ರಾಜ್ಯದ 10 ಮಹಾನಗರ ಪಾಲಿಕೆ, 61 ನಗರ ಸಭೆ, 114 ಪಟ್ಟಣ ಪಂಚಾಯಿತಿ ಸೇರಿ ಎಲ್ಲ 315 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ವಸೂಲಾತಿಗೆ ಸ್ಥಳೀಯ ಮಹಿಳಾ ಸ್ವಸಹಾಯ ಗುಂಪುಗಳ ಸೇವೆ ಪಡೆಯಲು ನಿರ್ಧರಿಸಲಾಗಿದೆ. ವಸೂಲಿ ಮಾಡುವ ಮೊತ್ತದಲ್ಲಿ ಪ್ರೋತ್ಸಾಹ ಧನವಾಗಿ ಶೇ. 5ರಷ್ಟು ನೀಡಲಾಗುವುದು. ಸ್ಥಳೀಯ ಸಂಸ್ಥೆಗಳಲ್ಲಿ ಸುಮಾರು ಶೇಕಡ 40ರಷ್ಟು ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ಹಾಗೂ ಮಹಿಳಾ ಸ್ವಸಹಾಯ ಗುಂಪುಗಳನ್ನು ಉತ್ತೇಜಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular