HomeKarnatakaಸಿಎಂ ಸಿದ್ಧರಾಮಯ್ಯರಿಂದ ಟಿ.ಎನ್. ಸೀತಾರಾಂ ‘ನೆನಪಿನ ಪುಟಗಳು’ ಲೋಕಾರ್ಪಣೆ

ಸಿಎಂ ಸಿದ್ಧರಾಮಯ್ಯರಿಂದ ಟಿ.ಎನ್. ಸೀತಾರಾಂ ‘ನೆನಪಿನ ಪುಟಗಳು’ ಲೋಕಾರ್ಪಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಟಿ.ಎನ್. ಸೀತಾರಾಂ ಅವರ “ನೆನಪಿನ ಪುಟಗಳು” ಗ್ರಂಥ ಲೋಕಾರ್ಪಣೆಗೊಳಿಸಿದರು.

ಅವರು ಮಾತನಾಡಿ, ಟಿ.ಎನ್.ಸೀತಾರಾಂ ಸುಮಾರು 40 ವರ್ಷಗಳ ಒಡನಾಟವಿರುವ ಆಪ್ತಸ್ನೇಹಿತ. ನಾನು ಲಂಕೇಶ್ ಪತ್ರಿಕಾಲಯಕ್ಕೆ ಭೇಟಿ ನೀಡುತ್ತಿದ್ದೆ. ಕಾನೂನು ವಿದ್ಯಾರ್ಥಿಯಾಗಿದ್ದಾಗ ಪ್ರೊ. ನಂಜುಂಡಸ್ವಾಮಿಯವರು ಕಾನೂನು  ಕಾಲೇಜಿನ ಪ್ರಾಧ್ಯಾಪಕರಾಗಿದ್ದರು. ಆಗ ರಾಜಕೀಯ ಕ್ಷೇತ್ರದಲ್ಲಿ ಆಸಕ್ತಿಯಿದ್ದ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸುತ್ತಿದ್ದರು. ಸಮಾಜವಾದಿ ಯುವಜನ ಸಭಾದಲ್ಲಿ ನಾನು ಸದಸ್ಯನಾಗಲು ನೆರವಾದರು. 1971 ರಲ್ಲಿ ವೀರೆಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿದ್ದಾಗ, ಸರ್ಕಾರದ ವಿರುದ್ಧ ನಡೆದ ಚಳವಳಿಯಲ್ಲಿ ನಾನು ಭಾಗಿಯಾಗಿದ್ದೆ. ನನ್ನ ರಾಜಕೀಯ ಜೀವನ ಪ್ರಾರಂಭವಾಗಲು ಪ್ರೊ. ನಂಜುಂಡಸ್ವಾಮಿಯವರೇ ಕಾರಣ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನತಾಪಾರ್ಟಿಯಲ್ಲಿ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನನಗೆ ಪಕ್ಷದ ನಾಯಕರು ಪ್ರೋತ್ಸಾಹ ನೀಡಿದರು. ನಂತರ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆ ಗೆದ್ದ ಮೇಲೆ ರಾಮಕೃಷ್ಣ ಹೆಗಡೆಯವರಿಗೆ ಬೆಂಬಲ ಸೂಚಿಸಿದೆ. ನಂತರ ಕಾವಲು ಸಮಿತಿಯ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದೆ. 1984 ರಲ್ಲಿ ರೇಷ್ಮೆ ಸಚಿವನಾಗಿ ಕೆಲಸ ಮಾಡಿದೆ. 1985 ರಲ್ಲಿ ಜನತಾದಳದ ಪರವಾಗಿ ನಿಂತು ಜಯ ಸಾಧಿಸಿದ ನಂತರ ಪಶುಸಂಗೋಪನೆ ಸಚಿವನಾಗಿ ಕೆಲಸ ನಿರ್ವಹಿಸಿದೆ. ಆ ಸಂದರ್ಭದಲ್ಲಿ ಕಾರಣಾತರಗಳಿಂದ ಸಚಿವ ಸ್ಥಾನ ಕಳೆದುಕೊಳ್ಳಬೇಕಾಯಿತು. ಆ ಸಂದರ್ಭದಲ್ಲಿ ನನ್ನ ಬಳಿಯಿದ್ದ ಸ್ಕೂಟರ್ ನಲ್ಲಿ ಓಡಾಡುತ್ತಿದ್ದೆ ಎಂದು ನೆನಪಿಸಿಕೊಂಡರು.

ಟಿ.ಎನ್. ಸೀತಾರಾಂ ಅವರು ಬದುಕಿನ ಎಲ್ಲ ಸ್ತರಗಳ ಅನುಭವ ಇರುವವರು. ವಿದ್ಯಾರ್ಥಿ ದೆಸೆ, ಸ್ನೇಹಿತರ ಒಡನಾಟ, ರಾಜಕೀಯ, ಕಲಾ ಸೇವೆಯಲ್ಲಿ ತೊಡಗಿರುವ ಸೀತಾರಾಂ ಅವರು ಬಹುಮುಖ ಪ್ರತಿಭೆ. ರಾಮಕೃಷ್ಣ ಹೆಗಡೆಯವರ ಆಪ್ತರಾಗಿರುವವರು. ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದಿದ್ದರೆ, ಶಾಸಕರಾಗುವ ಸಾಧ್ಯತೆಯೂ ಇತ್ತು. ರಾಮಕೃಷ್ಣ ಹೆಗಡೆಯವರಿಗೆ ಬಹಳ ಜನಪ್ರಿಯತೆ ಇದ್ದ ಕಾರಣ, ಜನತಾ ಪಾರ್ಟಿ ಪರವಾದ ಅಲೆ ಇತ್ತು ಎಂದರು.

ನೆನಪಿನ ಪುಟಗಳ ಪುಸ್ತಕವನ್ನು ಉತ್ತಮವಾಗಿ ಹಾಗೂ ಸತ್ಯವನ್ನೇ ಬರೆದಿದ್ದಾರೆ. ನನ್ನ  ಉತ್ತಮ ಸ್ನೇಹಿತರಾಗಿರುವ ಟಿ.ಎನ್.ಸೀತಾರಾಂ ಅವರು ಬರೆದಿರುವ ಕೃತಿಯನ್ನು ಅತ್ಯಂತ ಸಂತೋಷದಿಂದ ಬಿಡುಗಡೆ ಮಾಡುತ್ತಿದ್ದೇನೆ ಎಂದರು.

ಹಿರಿಯ ನಟ, ಆಪ್‌ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಲೇಖಕಿಯರ ಸಂಘದ ಅಧ್ಯಕ್ಷರಾದ ಹೆಚ್.ಎಲ್ ಪುಷ್ಪ, ಏಷಿಯಾನೆಟ್ ಸುವರ್ಣ ಸಂಪಾದಕ ರವಿ ಹೆಗ್ಡೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular