HomeKarnatakaಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ರಿಂದ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ

ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ರಿಂದ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ

ಬೆಂಗಳೂರು: ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಜನ ಗಣತಿ 2027ರ ಅಂಗವಾಗಿ ಸ್ವಯಂ ಗಣತಿ ವ್ಯವಸ್ಥೆ ಪರಿಚಯಿಸಿದ್ದು, ಬುಧವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ತಮ್ಮ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ ಪೂರ್ಣಗೊಳಿಸಿದರು.

2026 ರ ಏಪ್ರಿಲ್ 1 ರಿಂದ 15 ರವರೆಗೆ ಎಲ್ಲಾ ನಾಗರಿಕರು ಅಧಿಕೃತ ಪೋರ್ಟಲ್ se.census.gov.in ಮೂಲಕ ತಮ್ಮ ಮಾಹಿತಿಯನ್ನು ಆನ್ಲೈನ್ನಲ್ಲಿ ದಾಖಲಿಸಿಕೊಳ್ಳಬೇಕೆಂದು ಅವರು ತಿಳಿಸಿದರು.

ನಮ್ಮ ಜನಗಣತಿ – ನಮ್ಮ ಅಭಿವೃದ್ಧಿ ಎಂಬ ಧ್ಯೇಯ ವಾಕ್ಯದೊಂದಿಗೆ ಸರ್ಕಾರ ಜನಗಣತಿ 2027 ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಸರ್ಕಾರ ಸ್ವಯಂ ಗಣತಿ ವ್ಯವಸ್ಥೆಯನ್ನು ಪರಿಚಯಿಸಿದೆ. ಈ ಪ್ರಕ್ರಿಯೆ ಸರಳ ಮತ್ತು ಸುರಕ್ಷಿತವಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊಬೈಲ್ ಸಂಖ್ಯೆ ಮತ್ತು OTP ಮೂಲಕ ಸುಲಭವಾಗಿ 5 ರಿಂದ 10 ನಿಮಿಷಗಳಲ್ಲಿ ಸ್ವಯಂ ಗಣತಿ ಪೂರ್ಣಗೊಳಿಸಬಹುದಾಗಿದೆ ಎಂದು ತಮ್ಮ ಅನುಭವ ಹಂಚಿಕೊಳ್ಳುತ್ತಾ,  ಪ್ರಕ್ರಿಯೆ ಪೂರ್ಣಗೊಂಡ ನಂತರ ನಿಮ್ಮ ಅರ್ಜಿಯ ಸಂಖ್ಯೆ ದೊರೆಯುವುದು. ಈ ಸಂಖ್ಯೆಯನ್ನು ಏಪ್ರಿಲ್ 16 ರಿಂದ ಮೇ 15 ರವರೆಗೆ ಮನೆಮನೆಗೆ ಭೇಟಿ ನೀಡುವ ಗಣತಿದಾರರಿಗೆ ನೀಡಿದಲ್ಲಿ, ಗಣತಿದಾರರು ಸ್ವಲ್ಪ ಸಮಯದಲ್ಲಿ ಗಣತಿ ಪೂರ್ಣಗೊಳಿಸಲು ಹಾಗೂ ಯಾವುದಾದರೂ ತಿದ್ದುಪಡಿ ಇದ್ದಲ್ಲಿ ಮಾಡಿಕೊಳ್ಳಬಹುದಾಗಿದೆ ಎಂದ ಅವರು, ಒಂದು ವೇಳೆ ಮೊಬೈಲ್ ಅಥವಾ ಕಂಪ್ಯೂಟರ್ ಇಲ್ಲದಿದ್ದಲ್ಲಿ ಸಮೀಪದ ಕಂಪ್ಯೂಟರ್ ಕೇಂದ್ರಗಳಿಂದ ಅಥವಾ ಸ್ನೇಹಿತರ ಮೊಬೈಲಿನಿಂದ ಮಾಹಿತಿ ಸಲ್ಲಿಸಿ ನೋಂದಣಿ ಸಂಖ್ಯೆಯನ್ನು ಪಡೆಯಬೇಕು ಎಂದು ಹೇಳಿದರು.

ಜನಗಣತಿ ನಮ್ಮ ರಾಜ್ಯ ಮತ್ತು ದೇಶದ ಭವಿಷ್ಯ ರೂಪಿಸುವ ಮಹತ್ವದ ಕಾರ್ಯ. ಇದು ದತ್ತಾಂಶ ಆಧಾರಿತ ನಿರ್ಧಾರಗಳಿಗೆ ಸಹಾಯ ಮಾಡುತ್ತದೆ. ಆರೋಗ್ಯ, ಶಿಕ್ಷಣ, ವಸತಿ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸಮರ್ಪಕ ಸಂಪನ್ಮೂಲ ಹಂಚಿಕೆಗೆ ದಾರಿ ತೋರುತ್ತದೆ. ನಿಮ್ಮ ಭಾಗವಹಿಸುವಿಕೆ ಅತ್ಯಂತ ಮುಖ್ಯ. ಇದು ಕೇವಲ ಕರ್ತವ್ಯವಲ್ಲ— ಕರ್ನಾಟಕದ ಅಭಿವೃದ್ಧಿಗೆ ನಿಮ್ಮ ಕೊಡುಗೆಯಾಗಿದೆ. ಇಂದು ನೀಡುವ ನಿಖರ ಮಾಹಿತಿ, ನಾಳೆಯ ಉತ್ತಮ ನೀತಿಗಳು ಮತ್ತು ಸೇವೆಗಳಿಗೆ ಆಧಾರವಾಗುತ್ತದೆ. ಜನಗಣತಿಯಿಂದ ಯಾರು ಬಿಟ್ಟು ಹೋಗದಂತೆ ಸರ್ಕಾರ ಮುತುವರ್ಜಿ ವಹಿಸಿದೆ. ನಿಗದಿತ ಅವಧಿಯಲ್ಲಿ ಸ್ವಯಂ ಗಣತಿಯನ್ನು ಪೂರ್ಣಗೊಳಿಸಿ, ಜನಗಣತಿ 2027 ಅನ್ನು ಯಶಸ್ವಿಗೊಳಿಸಲು ನಾವು ಎಲ್ಲರೂ ಕೈಜೋಡಿಸೋಣ ಎಂದು ನಾಗರಿಕರಲ್ಲಿ ಮನವಿ ಮಾಡಿದ್ದಾರೆ.

ಇದೇ ವೇಳೆ, ಜನಗಣತಿ ನಿರ್ದೇಶಕ ರಾಮಚಂದ್ರನ್ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಸ್ವಯಂ ಗಣತಿ ವ್ಯವಸ್ಥೆಯ ಬಗ್ಗೆ ವಿವರವಾದ ಮಾಹಿತಿ ನೀಡಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular