HomeKarnatakaBREAKING: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ: ಭೀಕರ ಅಪಘಾತದಲ್ಲಿ 5...

BREAKING: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸಾವು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ.

ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ನಗರ ಹೊರ ವಲಯದಲ್ಲಿ ಘಟನೆ ನಡೆದಿದ್ದು, ಟಾಟಾ ಸುಮೋ ವಾಹನದಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದಲ್ಲಿ 5ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಗೇಪಲ್ಲಿ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಾಟಾ ಸುಮೋ ಬೆಂಗಳೂರು –ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ದಟ್ಟ ಮಂಜು ಕವಿದಿದ್ದರಿಂದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ವಾಹನ ನಜ್ಜುಗುಜ್ಜಾಗಿದ್ದು, ಅದರಿಂದ ಮೃತದೇಹಗಳನ್ನು ಹೊರತೆಗೆಯಲು, ಗಾಯಾಳುಗಳನ್ನು ರಕ್ಷಿಸಲು ಹರಸಾಹಸ ನಡೆಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular