HomeKarnatakaನೀತಿ ಸಂಹಿತೆ ಉಲ್ಲಂಘನೆ: ಕೆ. ಸುಧಾಕರ್ ವಿರುದ್ಧ ಕೇಸ್ ದಾಖಲು

ನೀತಿ ಸಂಹಿತೆ ಉಲ್ಲಂಘನೆ: ಕೆ. ಸುಧಾಕರ್ ವಿರುದ್ಧ ಕೇಸ್ ದಾಖಲು

 ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಚುನಾವಣೆ ವೇಳೆ ರಾಜ್ಯ ಸರ್ಕಾರದ ಲೆಟರ್ ಹೆಡ್ ದುರ್ಬಳಕೆ ಆರೋಪದಡಿ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸುಧಾಕರ್ ಅವರು ರಾಜ್ಯ ಸರ್ಕಾರದ ಚಿಹ್ನೆ ಇರುವ ಲೆಟರ್ ಹೆಡ್ ನಲ್ಲಿ ಬೆಂಗಳೂರು ವಿಭಾಗ ಚುನಾವಣಾ ಆಯುಕ್ತರ ವಿಭಾಗಕ್ಕೆ ಪತ್ರ ವ್ಯವಹಾರ ಮಾಡಿದ್ದಾರೆ. ಪ್ರಾದೇಶಿಕ ಆಯುಕ್ತರ ಸೂಚನೆ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಏಪ್ರಿಲ್ 2ರ ಹಿಂದೆ ಮಾದರಿ ನೀತಿ ಸಂಹಿತೆ ಸಂದರ್ಭದಲ್ಲಿ ಸುಧಾಕರ್ ಲೆಟರ್ ಹೆಡ್ ನಲ್ಲಿ ಪತ್ರ ವ್ಯವಹಾರ ಮಾಡಿದ್ದಾರೆ. ಇದರಲ್ಲಿ ಸರ್ಕಾರದ ಚಿಹ್ನೆಯನ್ನು ಅನಧಿಕೃತವಾಗಿ ಬಳಕೆ ಮಾಡಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular