HomeKarnatakaಮರವೇರಿ ಸೊಪ್ಪು ಕಡಿಯುವಾಗ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು

ಮರವೇರಿ ಸೊಪ್ಪು ಕಡಿಯುವಾಗ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು

ಚಿಕ್ಕಬಳ್ಳಾಪುರ: ಮೇಕೆಗಳಿಗೆ ಮರವೇರಿ ಸೊಪ್ಪು ಕಡಿಯುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಅಚೇಪಲ್ಲಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ದಿಬ್ಬೂರುಹಳ್ಳಿ ಮೂಲದ ದೇವಪ್ಪ(12) ಮೃತಪಟ್ಟ ಬಾಲಕ. ಬರದಿಂದಾಗಿ ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ. ಇದರಿಂದಾಗಿ ಜಾನುವಾರುಗಳ ಮಾಲೀಕರು ಪರದಾಡುವಂತಾಗಿದೆ. ರಸ್ತೆ ಬದಿಗಳ ಮರಗಳಲ್ಲಿನ ಸೊಪ್ಪು ಕಡಿದು ಜಾನುವಾರುಗಳಿಗೆ ಹಾಕಲಾಗುತ್ತದೆ. ಇದೇ ರೀತಿ ಮೇಕೆಗಾಗಿ ದೇವಪ್ಪ ಅಚೇಪಲ್ಲಿ ಗ್ರಾಮದ ರಸ್ತೆ ಬಳಿಯ ಆಲದ ಮರವೇರಿ ಸೊಪ್ಪಿನ ರೆಂಬೆ ಕಡಿಯುವಾಗ ಮರದಡಿ ಹಾದುಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾನೆ. ಬಾಗೇಪಲ್ಲಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular