HomeLatest NewsBREAKING: ಪ್ರವಾಸ ಮುಗಿಸಿ ಬಂದ ಕೂಡಲೇ ದುಡುಕಿನ ನಿರ್ಧಾರ ಕೈಗೊಂಡ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

BREAKING: ಪ್ರವಾಸ ಮುಗಿಸಿ ಬಂದ ಕೂಡಲೇ ದುಡುಕಿನ ನಿರ್ಧಾರ ಕೈಗೊಂಡ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ. ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡರ ಸಂಬಂಧಿ ಹೇಮಂತ್(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಹೇಳಲಾಗಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಪಟ್ರೇನಹಳ್ಳಿಯ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಂಬಿಬಿಎಸ್ ವಿದ್ಯಾರ್ಥಿ ಹೇಮಂತ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮುದ್ದೇನಹಳ್ಳಿಯ ಸತ್ಯಸಾಯಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದ ಹೇಮಂತ್ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಾಯಿ ಜೊತೆಗೆ ಪ್ರವಾಸ ಮುಗಿಸಿ ಮನೆಗೆ ಬಂದಿದ್ದ ಮಗ ಸಂಜೆ ಸ್ನಾನ ಮುಗಿಸಿ ಇದ್ದಕ್ಕಿದ್ದಂತೆ ಆತ್ಮಹತ್ಯೆಗೆ ಶರಣಾಗಿದ್ದಾನೆ.ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರ ಮಾಡಲಾಗಿದೆ. ಶವಾಗಾರದ ಬಳಿ ಕೆ.ಪಿ. ಬಚ್ಚೇಗೌಡ ಮತ್ತು ಸಂಬಂಧಿಕರು ದೌಡಾಯಿಸಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular