HomeKarnatakaಚಿಕ್ಕಬಳ್ಳಾಪುರದಲ್ಲಿ ಘೋರ ಘಟನೆ: ದೇವಾಲಯಕ್ಕೆ ವಿದ್ಯುತ್ ದೀಪ ಅಳವಡಿಸುವಾಗ ಗೋಪುರದಿಂದ ಬಿದ್ದ ಯುವಕ: ದಾರುಣ ಸಾವು

ಚಿಕ್ಕಬಳ್ಳಾಪುರದಲ್ಲಿ ಘೋರ ಘಟನೆ: ದೇವಾಲಯಕ್ಕೆ ವಿದ್ಯುತ್ ದೀಪ ಅಳವಡಿಸುವಾಗ ಗೋಪುರದಿಂದ ಬಿದ್ದ ಯುವಕ: ದಾರುಣ ಸಾವು

ಚಿಕ್ಕಬಳ್ಳಾಪುರ: ದೇವಾಲಯಕ್ಕೆ ವಿದ್ಯುತ್ ದೀಪಗಳ ಅಲಂಕಾರಕ್ಕಾಗಿ ಅಳವಡಿಸುತ್ತಿದ್ದಾಗ ಗೋಪುರದಿಂದ ಕಾಲು ಜಾರಿ ಬಿದ್ದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದಲ್ಲಿ ನಡೆದಿದೆ.

ಶ್ರಾವಣ ಮಾಸದ ಕೊನೆಯ ಶನಿವಾರದ ಹಿನ್ನೆಲೆಯಲ್ಲಿ ಇಲ್ಲಿನ ಗುಡಿಬಂಡೆ ಪಟ್ಟಣದ 3ನೇ ವಾರ್ಡ್‌ನ ಕೆಳಗಿನ ಪೇಟೆ ನಿವಾಸಿ ರಹ್ಮತ್ ಮೃತ ದುರ್ದೈವಿ. ಶ್ರಾವಣಮಾಸದ ನಿಮಿತ್ತ ವಿಶೇಷ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಸಂತೆ ಬೀದಿಯಲ್ಲಿರುವ ಇತಿಹಾಸ ಪ್ರಸಿದ್ಧ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ವಿದ್ಯುತ್ ದೀಪಗಳ ಅಲಂಕಾರ ಕಾರ್ಯ ಕೈಗೊಳ್ಳಲಾಗಿತ್ತು. ದೇವಸ್ಥಾನದ ಟ್ರಸ್ಟ್ ವತಿಯಿಂದ ಅಲಂಕಾರ ಕೆಲಸವನ್ನು ರಹ್ಮತ್ ಅವರಿಗೆ ವಹಿಸಲಾಗಿತ್ತು. ದೇವಸ್ಥಾನದ ಸುತ್ತಮುತ್ತ ದೀಪಗಳ ಅಲಂಕಾರ ಮಾಡುತ್ತಿದ್ದ ರಹ್ಮತ್, ಬಳಿಕ ದೇವಸ್ಥಾನದ ಗೋಪುರದ ಮೇಲೂ ವಿದ್ಯುತ್ ದೀಪಗಳನ್ನು ಅಳವಡಿಸುವ ಕಾರ್ಯದಲ್ಲಿ ತೊಡಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲಂಕಾರ ಕಾರ್ಯ ಬಹುತೇಕ ಪೂರ್ಣಗೊಂಡು, ಕೊನೆಯ ಹಂತದ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಗೋಪುರದಿಂದ ಕೆಳಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡ ರಹ್ಮತ್ ಅವರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಕರೆದೊಯ್ದರಾದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ದಿನಗೂಲಿ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದ ರಹ್ಮತ್ ಗೆ ಸುಮಾರು ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದ ರಹ್ಮತ್ ಅಕಾಲಿಕ ಮರಣದಿಂದ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಘಟನೆ ಸಂಬಂಧ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular