BIG NEWS: ಗಣಿ ಅಧಿಕಾರಿಗಳು ಚೇಸ್ ಮಾಡುತ್ತಿದ್ದಂತೆ ಟಿಪ್ಪರ್ ನಿಂದ ಇಳಿದು ತಪ್ಪಿಸಿಕೊಳ್ಳಲು ಓಡಿ ಹೋಗುವಾಗ ಕಾರು ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಗಣಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಟಿಪ್ಪರ್ ಚಾಲಕ ತಪ್ಪಿಸಿಕೊಳ್ಳಲು ಓಡಿ ಹೋಗುತ್ತಿರುವಾಗ ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರದ ನಂದಿ ಕ್ರಾಸ್ ನ ಕೃಷ್ಣ ಕನ್ವೆನ್ಷನ್ ಸೆಂಟರ್ ಬಳಿ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ರಮೇಶ್ (35) ಮೃತ ಚಾಲಕ.

ಗಣಿ ಅಧಿಕಾರಿ ಸವಿತಾ ನೇತೃತ್ವದ ತಂಡ ಟಿಪ್ಪರ್ ಲಾರಿಯನ್ನು ಚೇಸ್ ಮಾಡಿದ್ದರು. ಈ ವೇಳೆ ಅಧಿಕಾರಿಗಳಿಗೆ ಹೆದರಿದ ಟಿಪ್ಪರ್ ಚಾಲಕ ಅರ್ಧರಸ್ತೆಯಲ್ಲಿಯೇ ಲಾರಿ ನಿಲ್ಲಿಸಿ ತಾನು ಕೆಳಗಿಳಿದು ತಪ್ಪಿಸಿಕೊಳ್ಳಲು ಓಡಿದ್ದಾನೆ. ಈ ವೇಳೆ ಎದುರಿನಿಂದ ಬಂದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ರಭಸಕ್ಕೆ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಟಿಪ್ಪರ್ ಲಾರಿ ಹಾಗೂ ಅಪಘಾತ ಮಾಡಿದ ಕಾರನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read