HomeLatest NewsBREAKING: ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ: ಓರ್ವ ಸ್ಥಳದಲ್ಲೇ ಸಾವು

BREAKING: ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ: ಓರ್ವ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಭಾಗ್ಯನಗರದ ಬಳಿ ಈ ಅಪಘಾತ ಸಂಭವಿಸಿದೆ. ಲಾರಿ, ಬಸ್ ಹಾಗೂ ಆಟೋ ನಡುವೆ ಡಿಕ್ಕಿಯಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಲುವೆಂದುಲ ಗ್ರಾಮದ 68 ವರ್ಷದ ವೃದ್ಧ ಮೃತ ದುರ್ದೈವಿ. ಘಟನೆಯಲ್ಲಿ 10 ಜನರು ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಂಕಲಮ್ಮ ದೇಗುಲದಿಂದ ಆಟೋದಲ್ಲಿ ಬರುತ್ತಿದ್ದ ವೇಳೆ ಆಟೋ ತಿರುವು ಪಡೆದುಕೊಳ್ಳುವಾಗ ಲಾರಿ ಡಿಕ್ಕಿಯಾಗಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಪಲ್ಟಿಯಾದ ಆಟೋ ಬಸ್ ಗೆ ಗುದ್ದಿದೆ. ಅಪಘಾತದಲ್ಲಿ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಭಾಗ್ಯನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular