HomeKarnatakaಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿಯ ನಾಗೇಶ್ (21) ಮೃತ ಯುವಕ. ಬೊಲೆರೊ ವಾಹನದಲ್ಲಿ ಜಿಲೆಟಿನ್ ಕಡ್ಡಿಗಳನ್ನು ಸಾಗಿಸುತ್ತಿದ್ದ ವೇಳೆ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಈ ದುರಂತ ಸಂಭವಿಸಿದೆ.

ಅಪಘಾತದ ಬಳಿಕ ಬೊಲೆರೊ ಚಾಲಕ ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೆರೇಸಂದ್ರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular