ಚಿಕ್ಕಬಳ್ಳಾಪುರ: ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು, ಕಾರು ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗೋಪಿನಾಥ ಬೆಟ್ಟದಲ್ಲಿ ನಡೆದಿದೆ.
ಯಲಹಂಕ ಮೂಲದ ನರಸಿಂಹಮೂರ್ತಿ ಎಂಬುವವರಿಗೆ ಸೇರಿದ ಕಾರಿಗೆ ಬೆಂಕಿ ಬಿದ್ದಿದೆ. ದೇವಸ್ಥಾನದ ಮುಂದೆ ಪಾರ್ಕಿಂಗ್ ನಲ್ಲಿ ಬ್ರೇಜಾ ಕಾರು ನಿಲ್ಲಿಸಿ ನರಸಿಂಹಮೂರ್ತಿ ದೇವಸ್ಥಾನಕ್ಕೆ ಹೋಗಿದ್ದರು. ದೇವರ ದರ್ಶನ ಪಡೆದು ಬಂದು ನೋಡುವಷ್ಟರಲ್ಲಿ ಕಾರು ಬೆಂಕಿಗಾಹುತಿಯಾಗಿದೆ.
ಕಾರಿನ ಬಾನೆಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.