HomeKarnatakaಚಿಕ್ಕಬಳ್ಳಾಪುರದಲ್ಲಿ ಡ್ರೋನ್ ಪರೀಕ್ಷಾ ಕೇಂದ್ರ ಸ್ಥಾಪನೆ ; ಸಚಿವ ಪ್ರಿಯಾಂಕ್ ಖರ್ಗೆ

ಚಿಕ್ಕಬಳ್ಳಾಪುರದಲ್ಲಿ ಡ್ರೋನ್ ಪರೀಕ್ಷಾ ಕೇಂದ್ರ ಸ್ಥಾಪನೆ ; ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕರ್ನಾಟಕವನ್ನು ಡ್ರೋನ್ ತಂತ್ರಜ್ಞಾನ, ಪರೀಕ್ಷೆ ಮತ್ತು ಪ್ರಮಾಣೀಕರಣದ ಪ್ರಮುಖ ಕೇಂದ್ರವನ್ನಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಜೀಡರಹಳ್ಳಿ ಗ್ರಾಮದಲ್ಲಿ ಡ್ರೋನ್ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಸುಮಾರು 19.26 ಎಕರೆ ಸರ್ಕಾರಿ ಜಮೀನಿನಲ್ಲಿ ಈ ಡ್ರೋನ್ ಪರೀಕ್ಷಾ ಕೇಂದ್ರ ನಿರ್ಮಾಣವಾಗಲಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ ₹42.83 ಕೋಟಿ ನೆರವು ನೀಡಲಿದೆ.

ಏನೆಲ್ಲಾ ಸೌಲಭ್ಯ ಇರಲಿದೆ?

ಡ್ರೋನ್‌ಗಳ ಹಾರಾಟ ಪರೀಕ್ಷೆ, ಕಾರ್ಯಕ್ಷಮತೆ ಹಾಗೂ ಸುರಕ್ಷತಾ ಮೌಲ್ಯಮಾಪನ, ಪ್ರಮಾಣೀಕರಣ ಸೇರಿದಂತೆ ಅತ್ಯಾಧುನಿಕ ಪರೀಕ್ಷೆಗಳಿಗೆ ಅಗತ್ಯವಿರುವ ಮೂಲಸೌಕರ್ಯವನ್ನು ಕೇಂದ್ರದಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ವಿಶೇಷವಾಗಿ BVLOS (ದೃಶ್ಯ ವ್ಯಾಪ್ತಿಯಾಚೆಗಿನ) ಹಾರಾಟ ಪರೀಕ್ಷೆಗಳಿಗೆ ಅಗತ್ಯವಿರುವ ವ್ಯವಸ್ಥೆಯೂ ಇಲ್ಲಿ ಇರಲಿದೆ.ಈ ಕೇಂದ್ರದಿಂದ ಡ್ರೋನ್ ಕ್ಷೇತ್ರದ ನವೋದ್ಯಮಗಳು, ಕೈಗಾರಿಕೆಗಳು, ಶೈಕ್ಷಣಿಕ ಸಂಸ್ಥೆಗಳು, ರಕ್ಷಣಾ ಕ್ಷೇತ್ರ ಹಾಗೂ ಜಾಗತಿಕ ತಂತ್ರಜ್ಞಾನ ಸಂಸ್ಥೆಗಳಿಗೆ ಹೊಸ ಅವಕಾಶಗಳು ಸಿಗಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಮಾತ್ರವಲ್ಲ, ಕರ್ನಾಟಕವೇ ಹೈಟೆಕ್ ಕೇಂದ್ರ: ಪ್ರಿಯಾಂಕ್ ಖರ್ಗೆ

ಕರ್ನಾಟಕವನ್ನು ಡ್ರೋನ್ ತಂತ್ರಜ್ಞಾನ, ಪರೀಕ್ಷೆ ಮತ್ತು ಪ್ರಮಾಣೀಕರಣದ ಪ್ರಮುಖ ಕೇಂದ್ರವನ್ನಾಗಿಸುವತ್ತ ಮತ್ತೊಂದು ಮಹತ್ವದ ಹೆಜ್ಜೆ.ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಜೀಡರಹಳ್ಳಿ ಗ್ರಾಮದಲ್ಲಿ ಡ್ರೋನ್ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಸುಮಾರು 19.26 ಎಕರೆ ಸರ್ಕಾರಿ ಜಮೀನಿನಲ್ಲಿ ನಿರ್ಮಾಣವಾಗಲಿರುವ ಈ ಕೇಂದ್ರಕ್ಕೆ ರಾಜ್ಯ ಸರ್ಕಾರ ₹42.83 ಕೋಟಿ ನೆರವು ನೀಡಲಿದೆ.

 ಡ್ರೋನ್‌ಗಳ ಹಾರಾಟ ಪರೀಕ್ಷೆ, ಕಾರ್ಯಕ್ಷಮತೆ ಹಾಗೂ ಸುರಕ್ಷತಾ ಮೌಲ್ಯಮಾಪನ, ಪ್ರಮಾಣೀಕರಣ ಮತ್ತು BVLOS (ದೃಶ್ಯ ವ್ಯಾಪ್ತಿಯಾಚೆಗಿನ) ಹಾರಾಟ ಪರೀಕ್ಷೆಗಳಿಗೆ ಅಗತ್ಯವಿರುವ ಆಧುನಿಕ ಮೂಲಸೌಕರ್ಯವನ್ನು ಇಲ್ಲಿ ಅಭಿವೃದ್ಧಿಪಡಿಸಲಾಗುವುದು. ನವೋದ್ಯಮಗಳು, ಕೈಗಾರಿಕೆಗಳು, ಶೈಕ್ಷಣಿಕ ಸಂಸ್ಥೆಗಳು, ರಕ್ಷಣಾ ಕ್ಷೇತ್ರ ಹಾಗೂ ಜಾಗತಿಕ ತಂತ್ರಜ್ಞಾನ ಸಂಸ್ಥೆಗಳಿಗೆ ಇದು ಹೊಸ ಅವಕಾಶಗಳನ್ನು ಸೃಷ್ಟಿಸಲಿದೆ.

ಬೆಂಗಳೂರು ಮಾತ್ರವಲ್ಲ — ಕರ್ನಾಟಕದ ಪ್ರತಿಯೊಂದು ಭಾಗವೂ ಹೈಟೆಕ್ ಉದ್ಯಮಗಳ ಬೆಳವಣಿಗೆಯ ಕೇಂದ್ರವಾಗಬೇಕು ಎಂಬುದು ನಮ್ಮ ಗುರಿ. ಚಿಕ್ಕಬಳ್ಳಾಪುರದ ಈ ಡ್ರೋನ್ ಪರೀಕ್ಷಾ ಕೇಂದ್ರವು ನವೋದ್ಯಮ, ಸಂಶೋಧನೆ ಮತ್ತು ಕೈಗಾರಿಕೆಯನ್ನು ಒಂದೇ ವೇದಿಕೆಯಲ್ಲಿ ಸಂಪರ್ಕಿಸುವ ಪ್ರಮುಖ ಕೇಂದ್ರವಾಗಿ ಹೊರಹೊಮ್ಮಲಿದೆ.

ಡ್ರೋನ್ ತಂತ್ರಜ್ಞಾನದಲ್ಲಿ ಕರ್ನಾಟಕದ ಮುನ್ನಡೆಯನ್ನು ಮತ್ತಷ್ಟು ಬಲಪಡಿಸಿ, ಜಾಗತಿಕ ಮಟ್ಟದ ತಂತ್ರಜ್ಞಾನ ಮತ್ತು ನಾವೀನ್ಯತೆಯ ತಾಣವಾಗಿ ಕರ್ನಾಟಕವನ್ನು ರೂಪಿಸುವ ನಮ್ಮ ಪ್ರಯತ್ನ ಮುಂದುವರಿಯಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕಲಬುರಗಿಯಲ್ಲಿ LEAP ಬೆಳವಣಿಗೆ ಪ್ರಯೋಗಾಲಯ

 ಬೆಂಗಳೂರು ಹೊರತಾದ ಕರ್ನಾಟಕದಲ್ಲೂ ನವೋದ್ಯಮ, ನಾವೀನ್ಯತೆ ಮತ್ತು ಉದ್ಯಮಶೀಲತೆಗೆ ಸಮಾನ ಅವಕಾಶ ಕಲ್ಪಿಸುವ ನಮ್ಮ ಪ್ರಯತ್ನಕ್ಕೆ ಮತ್ತಷ್ಟು ಬಲ ಸಿಕ್ಕಿದೆ. ಕಲಬುರಗಿ ಜಿಲ್ಲೆಯ ಅಕ್ಕಮಹಾದೇವಿ ಬಡಾವಣೆಯ ಸಿಎ ನಿವೇಶನ ಸಂಖ್ಯೆ 1 ಮತ್ತು 2ರಲ್ಲಿ ‘LEAP (Growth) Labs’ ಸ್ಥಾಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ₹1,000 ಕೋಟಿ ಮೊತ್ತದ LEAP ಕಾರ್ಯಕ್ರಮದ ಭಾಗವಾಗಿ ಈ ಪ್ರಯೋಗಾಲಯವು ಕಲ್ಯಾಣ ಕರ್ನಾಟಕದ ಯುವ ಪ್ರತಿಭೆಗಳು ಹಾಗೂ ನವೋದ್ಯಮಿಗಳಿಗೆ ಹೊಸ ಅವಕಾಶಗಳ ಬಾಗಿಲು ತೆರೆಯಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬೆಂಗಳೂರು ಮಾತ್ರವಲ್ಲ, ಕರ್ನಾಟಕದ ಪ್ರತಿಯೊಂದು ಭಾಗದಲ್ಲಿರುವ ಪ್ರತಿಭೆಯೂ ಬೆಳೆಯಬೇಕು, ಉದ್ಯಮವಾಗಿ ರೂಪುಗೊಳ್ಳಬೇಕು ಮತ್ತು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎಂಬುದು ನಮ್ಮ ಗುರಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

 ಕಲಬುರಗಿಯಲ್ಲಿ LEAP ಬೆಳವಣಿಗೆ ಪ್ರಯೋಗಾಲಯ ಸ್ಥಾಪನೆಯು ಬೆಂಗಳೂರು ಹೊರತಾದ ಕರ್ನಾಟಕದ ನವೋದ್ಯಮ ಇಕೋ ಸಿಸ್ಟಂ ಬಲಪಡಿಸುವ ಮಹತ್ವದ ಹೆಜ್ಜೆ. ಉತ್ತರ ಕರ್ನಾಟಕದ ಪ್ರತಿಭೆಗಳಿಗೆ ಅಗತ್ಯವಾದ ಅವಕಾಶ, ಮಾರ್ಗದರ್ಶನ ಮತ್ತು ಬೆಂಬಲವನ್ನು ಸ್ಥಳೀಯವಾಗಿಯೇ ಒದಗಿಸುವತ್ತ ಇದು ಹೊಸ ಅಧ್ಯಾಯಕ್ಕೆ ನಾಂದಿ ಹಾಡಲಿದೆ ಎಂದರು.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular