ಚಿಕ್ಕಬಳ್ಳಾಪುರ: ತೋಟದ ಕೆಲಸಕ್ಕೆ ಹೋಗಿದ್ದ ಮಗಳು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿದ್ದು, ಆಕೆಯನ್ನು ರಕ್ಷಿಸಲು ಹೋದ ತಂದೆಯೂ ನೀರು ಪಾಲಾಗಿದ್ದು, ಇಬ್ಬರು ನೀರಿನಲ್ಲಿ ಮುಳುಗಿ ಸವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ನಡೆದಿದೆ.
ಶೆಟ್ಟಿಹಳ್ಳಿ ಗ್ರಾಮದ ರೈತ ನಾಗೇಶ್ ಹಾಗೂ ಮಗಳು ಧನುಶ್ರೀ ಮೃತರು. ಧನುಶ್ರೀ 6ನೇ ತರಗತಿಯಲ್ಲಿ ಓದುತ್ತಿದ್ದಳು. ಅಪ್ಪ ತೋಟದ ಕೆಲಸಕ್ಕೆ ಹೋಗಿದ್ದ ವೇಳೆ ಮಗಳು ತೋಟಕ್ಕೆ ಹೋಗಿದ್ದಾಳೆ. ಕೆರೆ ನೀರಿನಲ್ಲಿ ಕಾಲು ತೊಳೆಯಲು ಹೋಗಿ ಜಾರಿ ಕೆರೆಗೆ ಬಿದ್ದಿದ್ದಾಳೆ. ಕೆರೆಗೆ ಬಿದ್ದ ಮಗಳನ್ನು ರಕ್ಷಿಸಲು ತಂದೆ ನಾಗೇಶ್ ಕೂಡ ಕೆರೆ ಹಾರಿದ್ದಾರೆ. ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಇಬ್ಬರನ್ನು ಸ್ಥಳೀಯರು ಕೆರೆಯಿಂದ ಮೇಲಕೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲೇ ಒಬ್ಬರ ಪ್ರಾಣಪಕ್ಷಿ ಹಾರಿ ಹೋಗಿತ್ತು.
ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.