HomeKarnatakaSHOCKING NEWS: ತಾಯಿ ಹಾಗೂ ಇಬ್ಬರು ಮಕ್ಕಳು ಕೆರೆಯಲ್ಲಿ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ

SHOCKING NEWS: ತಾಯಿ ಹಾಗೂ ಇಬ್ಬರು ಮಕ್ಕಳು ಕೆರೆಯಲ್ಲಿ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ

ಚಿಕ್ಕಬಳ್ಳಾಪುರ: ತಾಯಿ ಹಾಗೂ ಇಬ್ಬರು ಮಕ್ಕಳು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಕೆರೆಯಲ್ಲಿ ನಡೆದಿದೆ.

ತಾಯಿ ರಾಧಾ ಹಾಗೂ ಇಬ್ಬರು ಹೆಣ್ಣು ಮಕ್ಕಳ ಶವ ಪತ್ತೆಯಾಗಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮಹಿಳೆ ರಾಧಾ ಚಿಂತಾಮಣಿ ತಾಲೂಕಿನ ಮಲ್ಲಿಕಾರ್ಜುನ ಎಂಬುವವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು. ಆದರೆ ಕುಟುಂಬಿಕ ಜಗಳದಿಂದ ಮಹಿಳೆ ನೊಂದಿದ್ದರು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಾಯಿ ಹಾಗೂ ಮಕ್ಕಳ ಸಾವಿನ ಬಗ್ಗೆ ತನಿಖೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular