ಚಿಕ್ಕಬಳ್ಳಾಪುರ: ಮಂಚೇನಹಳ್ಳಿಯಲ್ಲಿ ಕಲ್ಲು ಕ್ವಾರಿ ಕ್ರಷರ್ ಗೆ ಅಕ್ರಮವಾಗಿ ರಸ್ತೆ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್ ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಗುಂಡಿನ ದಾಳಿ ನಡೆಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ವೈ.ಎ.ನಾರಾಯಣಸ್ವಾಮಿ ಸಂಬಂಧಿ ಸಕಲೇಶಕುಮಾರ್ ಬಂಧಿತ ಆರೋಪಿ. ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಏಕಾಏಕಿ ಸಿನಿಮೀಯ ರೀತಿಯಲ್ಲಿ ಆರೋಪಿ ಮೂರು ಸುತ್ತು ಗುಂಡು ಹಾರಿಸಿದ್ದು, ಒಂದು ಗುಂಡು ಚಿಕನ್ ರವಿ ಎಂಬುವವರ ದೇಹ ಹೊಕ್ಕಿದೆ. ಅವರ ಸ್ಥಿತಿ ಗಂಭಿರವಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣ ಸಂಬಂಧ ಸದ್ಯ ಆರೋಪಿಯನ್ನು ಮಂಚೇನಹಳ್ಳಿ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.