ಚಿಕ್ಕಬಳ್ಳಾಪುರ: ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಸಾವನ್ನಪ್ಪಿರುವ ದಾರುಣ ಅಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ದಿಗುವನೆಟ್ಟ ಗ್ರಾಮದಲ್ಲಿ ನಡೆದಿದೆ.
ಆಶಾಬಿ (54) ಮೃತ ದುರ್ದವಿ. ಆಶಾಬಿ ಹಾಗೂ ಪತಿ ಮಾಬುಸಾಬ್ ಮೀನು ಹಿಡಿದು ಜೀವನ ನಡೆಸುತ್ತಿದ್ದರು. ಕೆರೆಯಲ್ಲಿ ಬಲೆ ಹಾಕಿ ಮೀನು ಹಿಡಿಯುವಾಗ ಕೆರೆಯಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದ್ದು, ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ್ದಾರೆ.
ಚೇಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
