HomeKarnatakaಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡಿದ್ದು ಸಾಕು ಎಂದು ಬುದ್ಧಿವಾದ ಹೇಳಿದ್ದಕ್ಕೆ ಯುವಕನಿಂದ ದುಡುಕಿನ ನಿರ್ಧಾರ: ಆತ್ಮಹತ್ಯೆಗೆ ಶರಣು

ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡಿದ್ದು ಸಾಕು ಎಂದು ಬುದ್ಧಿವಾದ ಹೇಳಿದ್ದಕ್ಕೆ ಯುವಕನಿಂದ ದುಡುಕಿನ ನಿರ್ಧಾರ: ಆತ್ಮಹತ್ಯೆಗೆ ಶರಣು

ಚಿಕ್ಕಬಳ್ಳಾಪುರ: ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಯುವಕನಿಗೆ ಮನೆಯವರು ಬುದ್ಧಿವಾದ ಹೇಳಿದ್ದೇ ತಪ್ಪಾಗಿ ಹೋಗಿದೆ. ದುಡುಕಿದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಪ್ಯಾಯಲಗುರ್ಕಿ ಗ್ರಾಮದಲ್ಲಿ ನಡೆದಿದೆ.

21 ವರ್ಷದ ಗಿರೀಶ್ ಆತ್ಮಹತ್ಯೆಗೆ ಶರಣಾಗಿರುವ ಯುವಕ. ಗಿರೀಶ್ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಜಾಗದಲ್ಲಿ ಹಾಡು ಹಾಕಿ ಡ್ಯಾನ್ಸ್ ಮಾಡುತ್ತಿದ್ದ. ಮಧ್ಯರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಇದರಿಂದ ಯುವಕನ ತಾಯಿ ಹಾಗೂ ಸಹೋದರ ಬೈದು ಬುದ್ಧಿ ಹೇಳಿದ್ದಾರೆ. ಡಾನ್ಸ್ ಮಾಡಿದ್ದು ಸಾಕು ಮನೆಗೆ ಬಾ ಎಂದು ಕರೆದಿದ್ದಾರೆ. ಇಷ್ಟಕ್ಕೆ ನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಗ್ರಾಮದ ಹೊರವಲಯದ ಮುತ್ತುರಾಯಸ್ವಾಮಿ ದೇವಾಲಯದ ಬಳಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಿಗ್ಗೆ ಹೊಲದ ಕೆಲಸಕ್ಕೆ ಹೋಗುತ್ತಿದ್ದ ಗ್ರಾಮದ್ಥರು ಮರದಲ್ಲಿ ನೇತಾಡುತ್ತಿದ್ದ ಯುವಕನ ಶವ ಕಂಡು ಮನೆಯವರಿಗೆ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೇರೆಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular