HomeKarnatakaBREAKING: ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ಐವರು ದುರ್ಮರಣ

BREAKING: ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ಐವರು ದುರ್ಮರಣ

ಚಿಕ್ಕಬಳ್ಳಾಪುರ: ಥಾರ್, ಆಟೋ, ಕ್ಯಾಂಟರ್ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ನಡೆದಿದೆ.

ಇಲ್ಲಿನ ಸುಂಕಲಮ್ಮ ದೇವಸ್ಥಾನದ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಆಟೋದಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಥಾರ್ ಜೀಪ್ ಹಿಂದಿನಿಂದ ಬಂದು ಆಟೋಗೆ ಡಿಕ್ಕಿ ಹೊಡೆದಿದೆ. ಆಟೋ ಕ್ಯಾಂಟರ್ ಗೆ ಗುದ್ದಿದ್ದು, ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular